Kiccha Sudeep: ಮಾತು ಕೊಟ್ಟಂತೆ ವಿಷ್ಣು ಸ್ಮಾರಕಕ್ಕೆ ಭೂಮಿ ಖರೀದಿಸಿದ ಕಿಚ್ಚ ಸುದೀಪ್!!

Share the Article

Kiccha Suddep : ನಟ ಸಾಹಸ ಸಿಂಹ ವಿಷ್ಣುವರ್ಧನ್ (Dr. Vishnuvardhan) ಅವರು ಸ್ಮಾರಕವನ್ನ ಅಭಿಮಾನ್ ಸ್ಟೂಡಿಯೋದಿಂದ (Abhiman Studio) ತೆರವು ಮಾಡಲಾಗಿತ್ತು. ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದ್ದು ಮಾತ್ರವಲ್ಲದೆ ರಾಜ್ಯದ ಜನತೆಗೆ ಭಾರೀ ಬೇಸರ ಉಂಟುಮಾಡಿತ್ತು. ಈ ಬಗ್ಗೆ ನಟ ಕಿಚ್ಚ ಸುದೀಪ್‌ (Kiccha Sudeep) ಪ್ರತಿಕ್ರಿಯೆ ನೀಡಿದ್ದು, ನಾನೇ ಮುಂದೆ ನಿಂತು ವಿಷ್ಣುವರ್ಧನ್ ಅವರ ಸ್ಮಾರಕ ಮರುಸ್ಥಾಪನೆ ಮಾಡುತ್ತೇನೆ ಎಂದು ಹೇಳಿದ್ದರು. ಸುದೀಪ್ ಅವರು ಇದೀಗ ಮಾತು ಕೊಟ್ಟಂತೆ ವಿಷ್ಣು ಸ್ಮಾರಕಕ್ಕೆ ಭೂಮಿಯನ್ನು ಖರೀದಿಸಿದ್ದಾರೆ.

ಹೌದು, ಇತ್ತೀಚೆಗೆ ದಾದಾ ಸಮಾಧಿ ಧ್ವಂಸ ವಿಚಾರ ತಿಳಿದು ಕಿಚ್ಚ ಭಾವುಕರಾಗಿದ್ದರು. “ಮತ್ತೆ ನ್ಯಾಯಾಲಯಕ್ಕೆ ಹೋಗಿ, ಯಾವ ಸಂಸ್ಥೆ ಅಥವಾ ವ್ಯಕ್ತಿ ಅದನ್ನ ಖರೀದಿ ಮಾಡಿರುವರೋ, ಅವರ ಮನ ಒಲಿಸಿ, ಅವರಿಗೆ ಸಾಹಸ ಸಿಂಹರ ಸ್ಮಾರಕ ಇದ್ದ, ಅಷ್ಟು ಜಾಗವನ್ನಾದರೂ ನಮಗೆ ಉಳಿಸಿ ಕೊಡುವುದಕ್ಕೆ ಮನವಿ ಮಾಡಲು ನಾನು ತಯಾರಿದ್ದೀನಿ” ಎಂದು ಸುದೀಪ್ ಟ್ವೀಟ್ ಮಾಡಿದ್ದರು. ಆದರೆ ಈಗ ಕೆಂಗೇರಿ ಬಳಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕಿಚ್ಚ ಭೂಮಿ ಖರೀದಿಸಿದ್ದಾರೆ. ಅಭಿಮಾನ್ ಸ್ಟುಡಿಯೋದಿಂದ ಕೊಂಚ ದೂರದಲ್ಲೇ ಇರುವ ಕೆಂಗೇರಿ ಬಳಿ ಅರ್ಧ ಎಕರೆ ಜಾಗ ಖರೀದಿಸಿದ್ದಾರೆ.

ಇನ್ನು ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್ ಹುಟ್ಟುಹಬ್ಬದ ದಿನವೇ ಅಲ್ಲಿ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕುವುದಾಗಿ ಮಾಹಿತಿ ಲಭ್ಯವಾಗುತ್ತಿದೆ. ಈ ಬಗ್ಗೆ ವಿಷ್ಣು ಸೇನಾ ಸಮಿತಿ ಅಧ್ಯಕ್ಷ ಹಾಗೂ ಸುದೀಪ್ ಆಪ್ತ ವೀರಕಪುತ್ರ ಶ್ರೀನಿವಾಸ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಸೆಪ್ಟೆಂಬರ್ 2ರಂದು ಸುದೀಪ್ ಹುಟ್ಟುಹಬ್ಬದ ದಿನವೇ ಹೊಸ ಸ್ಮಾರಕದ ಬಗ್ಗೆ ಮತ್ತಷ್ಟು ಮಾಹಿತಿ ನೀಡುತ್ತೇವೆ. ಆ ಸ್ಮಾರಕದಲ್ಲಿ ಏನೆಲ್ಲಾ ಇರಲಿದೆ ಎನ್ನುವ ರೂಪುರೇಷೆ ಕೂಡ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ. ಅಭಿಮಾನ್ ಸ್ಟುಡಿಯೋದಲ್ಲಿ ಸಮಾಧಿ ಇಲ್ಲ ಎನ್ನುವ ಬೇಸರದ ನಡುವೆ ಇದೀಗ ಕೆಂಗೇರಿಯಲ್ಲಿ ಸುದೀಪ್ ನೇತೃತ್ವದಲ್ಲಿ ಸ್ಮಾರಕ ನಿರ್ಮಾಣ ಆಗುತ್ತಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ.

Heavy Rain: ಭಾರೀ ಮಳೆ ಹಿನ್ನೆಲೆ – ಕಾವೇರಿ ನದಿ ನೀರಿನ ಮಟ್ಟ ಏರಿಕೆ – ದುಬಾರೆಗೆ ನೋ ಎಂಟ್ರಿ!

Comments are closed.