Saalumarada Thimmakka: ಬೇಲೂರು ತಹಶೀಲ್ದಾರ್ ವಿರುದ್ಧ ಪರಂಗೆ ಸಾಲು ಮರದ ತಿಮ್ಮಕ್ಕ ದೂರು

Saalumarada Thimmakka: ತಾನು ನೆಟ್ಟಿದ್ದ ಇನ್ನೂರಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ತೆರವು ಮಾಡಲಾಗಿದೆ ಎಂದು ಆರೋಪಿಸಿ ಬೇಲೂರು ತಹಶೀಲ್ದಾರ್ ವಿರುದ್ಧ ಗೃಹಸಚಿವ ಪರಮೇಶ್ವರ್ ಅವರಿಗೆ ಸಾಲು ಮರದ ತಿಮ್ಮಕ್ಕ ದೂರನ್ನು ನೀಡಿದ್ದಾರೆ.

ಸಾಲು ಮರದ ತಿಮ್ಮಕ್ಕ ನೆಟ್ಟಿದ್ದ ಮರಗಳನ್ನು ಹಾಸನದ ಬೇಲೂರು ತಾಲೂಕು ಕಚೇರಿ ಹಿಂಭಾಗದಲ್ಲಿ ನೆಡಲಾಗಿದ್ದು, ಅವುಗಳನ್ನು ಕಡಿಯಲಾಗಿದೆ ಎಂದು ಆರೋಪ ಮಾಡಲಾಗಿದೆ. ಬೇಲೂರು ತಾಲೂಕು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ವಿರುದ್ಧ ಆರೋಪ ಕೇಳಿ ಬಂದಿದೆ. ಈ ಕುರಿತು ತಹಶೀಲ್ದಾರ್ ವಿರುದ್ಧ ಗೃಹ ಸಚಿವರಿಗೆ ಮರದ ತಿಮ್ಮಕ್ಕ ದೂರು ಕೊಟ್ಟಿದ್ದಾರೆ.
Comments are closed.