ಭಾನುವಾರ, 25 ಅಕ್ಟೋಬರ್ 2026
Trending

Violence: ಮಹಿಳೆಯರು, ಮಕ್ಕಳ ಮೇಲಿನ ದೌರ್ಜನ್ಯ: ಎರಡುವರೆ ವರ್ಷದಲ್ಲಿ 43,052 ಪ್ರಕರಣ ದಾಖಲು : ವರದಕ್ಷಿಣೆ ಕಿರುಕುಳಕ್ಕೆ 340 ಗೃಹಿಣಿಯರ ಸಾವು

Violence: ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಹಲವು ಕಾನೂನುಗಳು ಇದ್ದರೂ, ಅವರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚು ತ್ತಲೇ ಇದೆ

Violence: ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಹಲವು ಕಾನೂನುಗಳು ಇದ್ದರೂ, ಅವರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚು ತ್ತಲೇ ಇದೆ. ಎರಡು ವರ್ಷ, ಏಳು ತಿಂಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ 43,053 ದೌರ್ಜನ್ಯ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿವೆ.

Sponsored

2023 ರಿಂದ 2025ರ ಜುಲೈ ಅವಧಿ ಯಲ್ಲಿ ಅತ್ಯಾಚಾರ, ಲೈಂಗಿಕ ಕಿರುಕುಳ, ವರದಕ್ಷಿಣೆ ಕಿರುಕುಳ ಹಾಗೂ ಸಾವು, ಗಂಡನಿಂದ ಕಿರುಕುಳ, ಪೋಕ್ಸ್ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ-2012), ಬಾಲ್ಯವಿವಾಹ, ಬಾಲ ಕಾರ್ಮಿಕ, ಮಕ್ಕಳ ರಕ್ಷಣೆ ಮತ್ತು ಆರೈಕೆ ಕಾಯ್ದೆ (ಜೆ.ಜೆ. ಕಾಯ್ದೆ) ಅಡಿ 43 ಸಾವಿರಕ್ಕೂ ಹೆಚ್ಚು ಮಹಿಳೆಯರು ಹಾಗೂ ಮಕ್ಕಳ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ, ವರದಕ್ಷಿಣೆ ಕಿರುಕುಳ ಹಾಗೂ ಪೋಕ್ಲಿ ಕಾಯ್ದೆ ಗಳ ಸಂಖ್ಯೆಯೇ ಅಧಿಕವಾಗಿದೆ.

ಕೆಲಸದ ಸ್ಥಳ ಸೇರಿದಂತೆ ಬೇರೆ ಬೇರೆ ಕಡೆಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರು ಕುಳ ನೀಡಿದಕ್ಕೆ ಸಂಬಂಧಿಸಿದಂತೆ 16,273 ಪ್ರಕರಣಗಳು, ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದಂತೆ ಒಟ್ಟು 5,456 ಪ್ರಕರಣ ಗಳು ದಾಖಲಾಗಿದ್ದು, ವರದಕ್ಷಿಣೆ ಕಿರುಕುಳ ದಿಂದಲೇ 340 ಗೃಹಿಣಿಯರು ಮೃತ ಪಟ್ಟಿದ್ದಾರೆ. ಗಂಡನ ಕಿರುಕುಳಕ್ಕೆ ಸಂಬಂಧಿಸಿದಂತೆ 7,546 ಪ್ರಕರಣಗಳು ದಾಖಲಾಗಿವೆ ಎಂಬುದು ಪೊಲೀಸ್ ಇಲಾಖೆಯ ಅಂಕಿ-ಅಂಶಗಳಿಂದ ಗೊತ್ತಾಗಿದೆ.

ಅತ್ಯಾಚಾರ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿವೆ. 2023 ರಲ್ಲಿ 600, 2024ರಲ್ಲಿ 739 ಹಾಗೂ 2025ರ ಜುಲೈವರೆಗೆ 549 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಪೋಕ್ಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, 202300 3,902, 202450 4,064 ಹಾಗೂ 2025ರ ಜುಲೈವರೆಗೆ 2,544 ಪ್ರಕರಣಗಳು ದಾಖಲಾಗಿವೆ.

ಬಡತನ, ಅನಕ್ಷರತೆ, ಕಾನೂನಿನ ಕುರಿತು ಸಮರ್ಪಕ ಮಾಹಿತಿ ಇಲ್ಲದಿರು ವುದರಿಂದ ಮಹಿಳೆಯರು ಹಾಗೂ ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಸಂತ್ರಸ್ತ ಮಹಿಳೆ ಯರಿಗೆ ಮಹಿಳಾ ಆಯೋಗವು ಪೊಲೀಸ್ ಇಲಾಖೆಯ ಸಹಕಾರದ ಮೂಲಕ ರಕ್ಷಣೆ ಒದಗಿಸುವುದರ ಜೊತೆಗೆ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧುರಿ ತಿಳಿಸಿದ್ದಾರೆ.

Supreme Court : ಬಾಡಿಗೆ ಮನೆಯಲ್ಲಿರುವವರಿಗೆ ಬಿಗ್ ಶಾಕ್ – ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ