India: ಪ್ರಧಾನಿ, ಸಿಎಂ, ಸಚಿವರ ಬಂಧನವಾದರೆ ಹುದ್ದೆಯಿಂದ ವಜಾ!

Share the Article

India: ಯಾವುದೇ ಗಂಭೀರ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟು 30 ದಿನಗಳವರೆಗೆ ಬಂಧನದಲ್ಲಿದ್ದರೆ ಅಂತಹ ಪ್ರಧಾನಿ, ಮುಖ್ಯಮಂತ್ರಿ ಮತ್ತು ಸಚಿವರನ್ನು ಅವರ ಹುದ್ದೆಯಿಂದ ವಜಾಗೊಳಿಸುವ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿದೆ.

ಈ ಐತಿಹಾಸಿಕ ಮಸೂದೆಯ ಪ್ರಕಾರ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿಯಾಗಲಿ, ಮುಖ್ಯಮಂತ್ರಿಯಾಗಲಿ, ಸಚಿವರಾಗಲಿ ಬಂಧನಕ್ಕೊಳಗಾದರೆ ಅಥವಾ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದರೆ ತಕ್ಷಣ ಅವರನ್ನು ಸಾಂವಿಧಾನಿಕ ಹುದ್ದೆಗಳಿಂದ ಕೆಳಗಿಸಲು ಕಾಯ್ದೆಯ ಅವಕಾಶ ಕಲ್ಪಿಸಲಿದೆ.

ಆಡಳಿತದಲ್ಲಿ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳುವ ಮಹತ್ವದ ಹೆಜ್ಜೆಯಾಗಿ ಈ ಐತಿಹಾಸಿಕ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸುವ ಯೋಜನೆಯನ್ನು ಭಾರತ ಸರ್ಕಾರ ಪ್ರಕಟಿಸಲಿದೆ.

Accident: ಪುತ್ತೂರು: ಶಾಲಾ ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಖಾಸಗಿ ಬಸ್‌!

Comments are closed.