Sameer MD: ಜಾಮೀನು ಸಿಕ್ಕರೂ ತಪ್ಪದ ಸಂಕಷ್ಟ – ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ದೂರು!!

Sameer MD: ಧರ್ಮಸ್ಥಳ ಕುರಿತು ಅಪಪ್ರಚಾರ ಆರೋಪದಡಿ ಯೂಟ್ಯೂಬರ್ ಸಮೀರ್ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಲು ತೆರಳಿದಾಗ ಅವರು ಜಾಮೀನು ಪಡೆದು ಪಾರಾಗಿದ್ದರು. ಆದರೀಗ ಯೂಟ್ಯೂಬರ್ ಎಂ.ಡಿ ಸಮೀರ್ ಗೆ ಸಂಕಷ್ಟ ಎದುರಾಗಿದ್ದು, ಮತ್ತೊಂದು ದೂರು ದಾಖಲಾಗಿದೆ. ವಿಶ್ವ ಹಿಂದೂ ಪರಿಷತ್ ಸದಸ್ಯ ಮಂಜು ಜೈನ್ ಎಂಬುವವರು ಚಿಕ್ಕಮಗಳೂರಿನ ಕಡೂರು ಪೊಲಿಸ್ ಠಾಣೆಗೆ ದೂರು ನೀಡಿದ್ದಾರೆ.

ಹೌದು, ಧರ್ಮಸ್ಥಳ ಕೇಸ್‌ಗೆ (Dharmasthala Case) ಸಂಬಂಧಪಟ್ಟಂತೆ ಯೂಟ್ಯೂಬ್ ವಿಡಿಯೋಗಳನ್ನು ಮಾಡಿ ಇತ್ತೀಚೆಗೆ ಭಾರೀ ಸುದ್ದಿಯಲ್ಲಿರುವ ಎಂಡಿ ಸಮೀರ್ (MD Sameer) ವಿರುದ್ಧ ಕೇಸ್ ದಾಖಲಾಗಿದ್ದು, ನಿರೀಕ್ಷಣಾ ಜಾಮೀನಿನ ಮೇಲೆ ಹೊರಗಿದ್ದಾರೆ. ಇದರ ನಡುವೆ ಸಮೀರ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಚಿಕ್ಕಮಗಳೂರಿನ (Chikkamagaluru) ಕಡೂರು (Kaduru) ತಾಲೂಕಿನ ಪೊಲೀಸ್ ಠಾಣೆಯಲ್ಲಿ ಸಮೀರ್ ವಿರುದ್ದ ಮತ್ತೊಂದು ಪ್ರಕರಣ ದಾಖಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಯ ನೀಡಿದ್ದಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಭಾವನೆಗೆ ಧಕ್ಕೆ ತಂದಿದ್ದಾರೆ. ಹೀಗಾಗಿ ಯೂಟ್ಯೂಬರ್ ಸಮೀರ್ ವಿರುದ್ಧ ಪ್ರಕರಣ ದಾಖಲಿಸಿಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಂಜು ಜೈನ್ ಎಂಬುವವರು ಕಡೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Comments are closed.