KSRTC Bus: ಬಸ್‌ ಪ್ರಯಾಣಿಕರಿಗೆ ಗಣೇಶ ಚತುರ್ಥಿ ಶುಭ ಸುದ್ದಿ – ಹೆಚ್ಚುವರಿ 1500 ವಿಶೇಷ ಸಾರಿಗೆ ಬಸುಗಳ ಸಂಚಾರ

Share the Article

KSRTC Bus: ಗಣೇಶ ಚತುರ್ಥಿ ಸಮೀಪಿಸುತ್ತಿರುವ ಹಿನ್ನೆಲೆ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ರಾಜ್ಯದಾದ್ಯಂತ ವಿವಿಧ ಸ್ಥಳಗಳಿಗೆ 1,500 ವಿಶೇಷ ಬಸ್‌ಗಳನ್ನು ಓಡಿಸುವುದಾಗಿ ಪ್ರಕಟಿಸಿದೆ.

ಆ.22ರಂದು ಶುಕ್ರವಾರ, ಆ.23ರಂದು ಬೆನಕನ ಅಮವಾಸ್ಯೆ, ಆ.24ರಂದು ನಾಲ್ಕನೇ ಶನಿವಾರ, ಆ.25ರಂದು ಭಾನುವಾರ, ಆ.25ರಂದು ಸ್ವರ್ಣಗೌರಿ ವ್ರತ ಮತ್ತು ಆ. 26ರಂದು ಗಣೇಶ ಹಬ್ಬ ಇರುವುದರಿಂದ ಸಾರ್ವಜನಿಕರು ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆ ಬಸ್‌ಗಳು ಕಾರ್ಯನಿರ್ವಹಿಸಲಿವೆ.

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ತಿರುಪತಿ, ವಿಜಯವಾಡ ಮತ್ತು ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಗಳು ವ್ವಸ್ಥೆಯನ್ನು ಕಲ್ಪಿಸಲಾಗಿದೆ.

ಬೆಂಗಳೂರಿನಿಂದ ರಾಜ್ಯ/ಅಂತರರಾಜ್ಯ ವಿವಿಧ ಸ್ಥಳಗಳಿಗೆ ತೆರಳಲು ಆ.22ರಿಂದ ಆ.26ರವರೆಗೆ ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹಬ್ಬ ಮುಗಿದ ನಂತರ ಆ.27 ಹಾಗೂ ನಂತರ ದಿನಗಳಂದು ಪ್ರಮುಖ ಸ್ಥಳಗಳಿಗೆ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆ ಬಸ್ಸುಗಳ ವ್ಯವಸ್ಥೆ ಮಾಡಲಾಗುವುದು.

ಸದರಿ ಹೆಚ್ಚುವರಿ ಸಾರಿಗೆಗಳ ಸದುಪಯೋಗಪಡಿಸಿಕೊಳ್ಳುವುದರೊಂದಿಗೆ, ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿ ಸುವಂತೆ ಮತ್ತು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಯಾಣಿಕರು www.ksrtc.karnataka.gov.inನಲ್ಲಿ ಆನ್‌ಲೈನ್‌ ಮೂಲಕ ತಮ್ಮ ಟಿಕೆಟ್‌ಗಳನ್ನು ಬುಕ್ ಮಾಡಬಹುದು.

Comments are closed.