Weather Report: ಕರ್ನಾಟಕದ ಹವಾಮಾನ ವರದಿ: ಮಳೆ ಇನ್ನು ಮುಂದುವರೆಯುತ್ತಾ? ಇಲ್ಲಾ ಕೊಂಚ ವಿರಾಮ ನೀಡುತ್ತಾ?

Weather Report: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಇರಲಿದ್ದು, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇರಲಿದೆ. ಕರಾವಳಿ ತೀರ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಇದೇ ವಾತಾವರಣ ಆಗಸ್ಟ್ 25ರ ತನಕ ಮುಂದುವರಿಯಲಿದ್ದು, 26ರಿಂದ 31ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುನ್ಸೂಚನೆ ಇದ್ದು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನದ ಒಳನಾಡಿನ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 25ರ ತನಕ ಇದೇ ವಾತಾವರಣ ಮುಂದುವರಿಯ ಸಾಧ್ಯತೆಗಳಿದ್ದು, 26ರಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಸೂಚನೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 24ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣ ಇರಲಿದ್ದು, 26ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
Dharmasthala: ಧರ್ಮಸ್ಥಳ: ಮಾಸ್ಕ್ ಮ್ಯಾನ್ ಅಸಲಿಮುಖ ಬಹಿರಂಗ: 10 ದಿನ ಎಸ್ಐಟಿ ವಶಕ್ಕೆ!
Comments are closed.