Mahesh Shetty Timarodi: ಮಹೇಶ್‌ ತಿಮರೋಡಿಗೆ ಜಾಮೀನು ಮಂಜೂರು

Share the Article

Udupi: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್‌ ತಿಮರೋಡಿಗೆ ಜಾಮೀನು ಮಂಜೂರು ಮಾಡಿ ಕೋರ್ಟ್‌ ಆದೇಶ ನೀಡಿದೆ.

ಎರಡು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಮಹೇಶ್‌ ಶೆಟ್ಟಿ ತಿಮರೋಡಿಗೆ ಇಂದು ಉಡುಪಿ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಆಗಸ್ಟ್‌ 21 ರಂದು ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಉಡುಪಿಯ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದರು.

ಉಡುಪಿ ನ್ಯಾಯಾಲಯದಲ್ಲಿ ಆರೋಪಿ ಮಹೇಶ್‌ ಶೆಟ್ಟಿ ತಿಮರೋಡಿ ಪರ ವಾದ ಮಂಡನೆ ಮಾಡಿದ ವಕೀಲರು, ಬಂಧಿಸಿದ ಪ್ರಕ್ರಿಯೆ ಕ್ರಮಬದ್ಧವಾಗಿಲ್ಲ. ಪ್ರಥಮ ನೋಟಿಸ್‌ ನೀಡಿ ಅದರ ಅವಧಿ ಮುಗಿಯುವ ಮೊದಲೇ ಎರಡನೇ ನೋಟಿಸ್‌ ನೀಡಿದ್ದಾರೆ. ತಿಮರೋಡಿಯವರ ಹೇಳಿಕೆಯಿಂದ ಯಾವುದೇ ಕೋಮು ಗಲಭೆ ಆಗಿಲ್ಲ. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ.

Comments are closed.