Yatnal: ಸ್ಪಷ್ಟತೆ ಇಲ್ಲದೆ ದಸರಾ ಉದ್ಘಾಟಿಸೋದು ಸರಿಯಲ್ಲ: ಲೇಖಕಿ ಬಾನು ಮುಷ್ತಾಕ್‌ ಕುರಿತು ಯತ್ನಾಳ್‌ ಟ್ವೀಟ್

Share the Article

Yatnal Tweeted About Mysore Dasara: ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಈ ಬಾರಿ ಮೈಸೂರು ದಸರಾ 2025 ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದು, ಇದಕ್ಕೆ ಬಿಜೆಪಿ ಊಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಈ ಕುರಿತು ಟ್ವೀಟ್‌ ಮಾಡಿದ್ದಾರೆ.

ನಾನು ವೈಯಕ್ತಿಕವಾಗಿ ಶ್ರೀಮತಿ ಭಾನು ಮುಶ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ.

ಇಸ್ಲಾಂ ಮೂರ್ತಿ ಪೂಜೆಯನ್ನು ಧಿಕ್ಕರಿಸಿ ಒಂದು ದೇವರು ಹಾಗೂ ಒಂದು ಗ್ರಂಥವನ್ನೇ ಒಪ್ಪಿಕೊಳ್ಳುತ್ತದೆ ಎಂಬ ನಂಬಿಕೆಯಲ್ಲಿ ಅವರು ಇನ್ನೂ ಇದ್ದಾರೆಯೇ, ಅಥವಾ ಎಲ್ಲಾ ಮಾರ್ಗಗಳೂ ಅಂತಿಮವಾಗಿ ಒಂದೇ ಮೋಕ್ಷಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಅವರು ನಂಬುತ್ತಾರೆಯೇ ಎಂಬುದರ ಬಗ್ಗೆ ಶ್ರೀಮತಿ ಭಾನು ಮುಶ್ತಾಕ್ ಅವರು ಸ್ಪಷ್ಟನೆ ನೀಡುವುದು ಅಗತ್ಯ.

ಈ ಸ್ಪಷ್ಟತೆ ಇಲ್ಲದೆ, ದಸರಾ ಉದ್ಘಾಟಿಸುವುದು ಸರಿಯಲ್ಲ. ಆದರೆ, ದಸರಾ ಉತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಅಥವಾ ಕವಿಗೋಷ್ಠಿಯಂತಹ ಸಾಹಿತ್ಯ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಅತಿಥಿಯಾಗಿ ಅವರು ಭಾಗವಹಿಸುವುದು ತಕ್ಕದ್ದಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಇನ್ನೊಂದು ಕಡೆ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಕೂಡಾ, ಭಾನು ಮುಷ್ತಾಕ್‌ ಕುರಿತು ನನಗೆ ಹೆಮ್ಮೆ ಇದೆ. ಮುಸ್ಲಿಮರು ಎನ್ನುವ ಕಾರಣಕ್ಕೆ ನನ್ನ ಅಪಸ್ವರ ಎತ್ತುತ್ತಿಲ್ಲ. ದಸರಾ ಜಾತ್ಯಾತೀತತೆಯ ಪ್ರತೀಕ ಅಲ್ಲ. ಇದು ಧಾರ್ಮಿಕ ಆಚರಣೆ. ದಸರಾ 100% ಧಾರ್ಮಿಕ ಆಚರಣೆ. ದುರ್ಗಾ ಪೂಜೆ, ನವರಾತ್ರಿ ಉತ್ಸವ ಇರುತ್ತದೆ. ಇದು ಧಾರ್ಮಿಕ ಹಬ್ಬ ಎಂದು ಹೇಳಿದ್ದಾರೆ.

Comments are closed.