D K Shivkumar : RSS ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ ಡಿಕೆ ಶಿವಕುಮಾರ್

Share the Article

D K Shivkumar : ಡಿ.ಕೆ ಶಿವಕುಮಾರ್ ಗುರುವಾರ ವಿಧಾನಸಭೆಯನ್ನುದ್ದೇಶಿಸಿ ಮಾತನಾಡುವಾಗ ಆರ್‌ಎಸ್‌ಎಸ್ (RSS) ಗೀತೆಯನ್ನು ಹಾಡಿ ಗಮನ ಸೆಳೆದಿದ್ದರು. ಇದು ಸಾಕಷ್ಟು ವಿವಾದಗಳನ್ನು ಹುಟ್ಟು ಹಾಕಿದ್ದಲ್ಲದೆ ಕಾಂಗ್ರೆಸ್ ನಾಯಕರಿಂದ ವಿರೋಧ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಕ್ಷಮೆಯಾಚಿಸಿದ್ದಾರೆ.

ಈ ಕುರಿತಾಗಿ ಮಾತನಾಡಿದ ಅವರು ನಾನು ಏನು ತಪ್ಪು ಮಾಡಿಲ್ಲ. ಆರ್‌ಎಸ್‌ಎಸ್‌ ಗೀತೆ (RSS Song) ಹಾಡು ಹಾಡಿದ್ದಕ್ಕೆ ನೋವಾಗಿದ್ರೆ ನನ್ನ ಕಾಂಗ್ರೆಸ್ ಕಾರ್ಯಕರ್ತರಿಗೆ, ಪಕ್ಷದ ನಾಯಕರಿಗೆ, ಇಂಡಿಯಾ ಕೂಟಾದ ನಾಯಕರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ.

ಅಲ್ಲದೆ ಕಾಂಗ್ರೆಸ್‌ ಬಗ್ಗೆ ನನ್ನ ನಿಲುವು ಸ್ಪಷ್ಟವಾಗಿದೆ. ನಾನು ಯಾರಿಂದಲೂ ಪಾಠ ಕಲಿಯುವ ಅಗತ್ಯ ಇಲ್ಲ. 1979 ರಿಂದಲೂ ನಾನು ಪಕ್ಷದ ಬೆಂಬಲಿಗನಾಗಿದ್ದು, ವಿದ್ಯಾರ್ಥಿ ದೆಸೆಯಿಂದಲೂ ಸಂಘಟನೆಯಲ್ಲಿ ಕೆಲಸ ಮಾಡಿದ್ದೇನೆ. ನನಗೆ ಯಾರಿಗೂ ಮನಸು ನೋಯಿಸಲು ಇಷ್ಟವಿಲ್ಲ. ನನ್ನ ಜೀವನೆ ಬೇರೆಯವರ ಜೀವನಕ್ಕೆ ಮೆಟ್ಟಿಲುಗಳಾಗಬೇಕು. ಇದಕ್ಕೆ ಬೇಕಿದ್ದರೆ ಕ್ಷಮಾಪಣೆ ಕೇಳಲೂ ಸಹ ನಾನು ಸಿದ್ದ ಎಂದು ನುಡಿದರು.

ನಾನು ಕಾಂಗ್ರಸ್ ಪಕ್ಷದಲ್ಲಿದ್ದೇನೆ ನಿಜ. ಹಾಗೆಂದು ನನ್ನ ಧರ್ಮ ನಾನು ಬಿಡಲ್ಲ. ನನ್ನ ಧರ್ಮದ ಜತೆಗೆ ಇತರ ಧರ್ಮಗಳ ಬಗ್ಗೆಯೂ ನನಗೆ ನಂಬಿಕೆ ಇದೆ. ಮುಸ್ಲಿಂ, ಕ್ರಿಶ್ಚಿಯನ್ ಇತರ ಧರ್ಮಗಳ ಬಗ್ಗೆಯೂ ಗೌರವ ಇದೆ. ಆದರೆ, ಇವೆಲ್ಲದಕ್ಕಿಂತಲೂ ಮಾನವ ಧರ್ಮದ ಮೇಲೆ ನಾನು ಹೆಚ್ಚು ನಂಬಿಕೆ ಇಟ್ಟಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Comments are closed.