Mangalore: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಇಡಿಯಿಂದ ಜೈಲಲ್ಲಿ ಶಂಕಿತ ಉಗ್ರರ ವಿಚಾರಣೆ

Mangalore: ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಕುರಿತಂತೆ ಜೈಲಿನಲ್ಲಿ ಶಂಕಿತ ಉಗ್ರರನ್ನು ಇಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ಶಂಕಿತ ಉಗ್ರರ ವಿಚಾರಣೆ ನಡೆಸಲಾಗಿದೆ. ಅಕ್ರಮ ಹಣ ಆರೋಪಿಗಳಿಗೆ ಸಂದಾಯವಾಗಿರುವ ಕುರಿತು ತನಿಖೆ ಕೈಗೊಂಡಿದ್ದು, ಶಾರಿಕ್ ಸೇರಿ ಪ್ರಕರಣದ ಇನ್ನಿತರ ಆರೋಪಿಗಳ ವಿಚಾರಣೆ ನಡೆಯಲಿದೆ.
ವಿದೇಶದಿಂದ ಆರೋಪಿಗಳಿಗೆ ಹಣ ಸಂದಾಯವಾಗಿರುವ ಕುರಿತು ತನಿಖೆ ಕೈಗೊಳ್ಳಲಾಗಿದೆ. ಈ ಕುರಿತು ವಿಚಾರಣೆ ನಡೆಸಿ ಮಾಹಿತಿ ಸಂಗ್ರಹ ಮಾಡಲಾಗಿರುವ ಕುರಿತು ವರದಿಯಾಗಿದೆ.
Comments are closed.