Puttur: ಪ್ರವೀಣ್‌ ನೆಟ್ಟಾರು ಕೊಲೆ ಆರೋಪಿ ಮಹಮ್ಮದ್‌ ಇಕ್ಬಾಲ್‌ ಗ್ರಾ.ಪಂ. ಸದಸ್ಯತ್ವ ರದ್ದು

Share the Article

Puttur: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ಗ್ರಾಮ ಪಂಚಾಯಿತಿಯ 1 ನೇ ವಾರ್ಡ್‌ನ ಸದಸ್ಯ ಕೆ.ಮಹಮ್ಮದ್‌ ಇಕ್ಬಾಲ್‌ರ ಸದಸ್ಯತ್ವವನ್ನು ರದ್ದು ಮಾಡಲಾಗಿದೆ ಎಂದು ವರದಿಯಾಗಿದೆ.

2024-25 ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆ ಘೋಷಣೆಯನ್ನು ನಿಗದಿತ ಸಮಯದಲ್ಲಿ ಸಲ್ಲಿಸದ ಕಾರಣ, ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993 ರ ಸೆಕ್ಷನ್‌ 43 (ಬಿ) (4) ರ ಅಡಿಯಲ್ಲಿ ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಇಕ್ಬಾಲ್‌ರ ಗ್ರಾಮ ಪಂಚಾಯಿತಿ ಸದಸ್ಯತ್ವವನ್ನು ರದ್ದು ಮಾಡಲಾಗಿದೆ.

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ. ಮಹಮ್ಮದ್‌ ಇಕ್ಬಾಲ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ.

Comments are closed.