Karanataka: ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಅದಿತಿ ಮೆಹೆಂದಳೆ ರಾಜ್ಯಕ್ಕೆ ಪ್ರಥಮ

Share the Article

Karanataka: ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯ ನಡೆಸಿದ ಈ ವರ್ಷದ ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಅದಿತಿ ಮೆಹೆಂದಳೆ ಎಂಬಾಕೆ ಶೇಕಡಾ 91.8 % ದೊಂದಿಗೆ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದಿರುತ್ತಾರೆ.‌

ಇವರು ಉಡುಪಿಯ ಸೃಷ್ಟಿ ನೃತ್ಯ ಕಲಾ ಕುಟೀರದ ಸಂಸ್ಥಾಪಕಿ ಮಂಜರಿ ಚಂದ್ರ ಪುಷ್ಪರಾಜ್ ರವರ ಶಿಷ್ಯೆ. ಪ್ರಸ್ತುತ ಮಣಿಪಾಲದ ಮಾಹೆ ಅಡಿಯಲ್ಲಿ ಬರುವ ಮಣಿಪಾಲ ಇನ್ಸ್ಟಿಟ್ಯೂಟ್ ಓಫ್ ಕಮ್ಯುನಿಕೇಷನ್ ಇಲ್ಲಿ ಬ್ಯಾಚುಲರ್ ಇನ್ ಮೀಡಿಯಾ ಅಂಡ್ ಕಮ್ಯುನಿಕೇಷನ್ ವ್ಯಾಸಂಗ ಮಾಡುತ್ತಿದ್ದಾಳೆ. ಈಕೆಗೆ 30 ಆಗಸ್ಟ್ ರಂದು ಮೈಸೂರು ಯುನಿವರ್ಸಿಟಿಯಲ್ಲಿ ಪ್ರಶಸ್ತಿ ಪತ್ರ ಪ್ರದಾನ ಸಮಾರಂಭ ನಡೆಯಲಿದೆ.

Suicide: ಗೌರಿ ಗಣೇಶ ಹಬ್ಬಕ್ಕೆ ತವರುಮನೆಯಿಂದ ಆಹ್ವಾನ ಬಂದಿಲ್ಲವೆಂದು ಗೃಹಿಣಿ ಆತ್ಮಹತ್ಯೆ!

Comments are closed.