RCB: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – 85 ದಿನಗಳ ಬಳಿಕ ಮತ್ತೆ ಬಾವುಕ ಪೋಸ್ಟ್ ಹಂಚಿಕೊಂಡ RCB!!

RCB: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೀಸನ್-18ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಜಯಭೇರಿ ಬಾರಿಸಿದರು ಕೂಡ ಅದೊಂದು ಕರಾಳ ದಿನವಾಗಿ ಉಳಿದುಕೊಂಡು ಬಿಟ್ಟಿತು. ಕಾರಣ ಎಲ್ಲರಿಗೂ ತಿಳಿದಂತೆ ಬೆಂಗಳೂರಿನಲ್ಲಿ ನಡೆದ RCB ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಅಭಿಮಾನಿಗಳು ಅಸುನೀಗಿದ್ದು. ಇದೀಗ ಸೈಲೆಂಟ್ ಆಗಿದ್ದ ಆರ್‌ಸಿಬಿ ಸುಮಾರು 85 ದಿನಗಳ ಬಳಿಕ ಬಾವುಕ ಪೋಸ್ಟ್ ಒಂದನ್ನು ಹಂಚಿಕೊಂಡಿದೆ.

ಹೌದು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ 3 ತಿಂಗಳ ಬಳಿಕ ಆರ್ ಸಿಬಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ. ಬರೋಬ್ಬರಿ 85 ದಿನಗಳ ನಂತರ ಆರ್‌ಸಿಬಿ ಪೋಸ್ಟ್ ಮಾಡಿದೆ.
RCB ಪೋಸ್ಟ್ ನಲ್ಲಿ ಏನಿದೆ?
ನಾವು ಪೋಸ್ಟ್ ಮಾಡಿ ಸುಮಾರು ಮೂರು ತಿಂಗಳಕಾಲಕಳೆದಿದೆ. ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನುಹಂಚಿಕೊಳ್ಳುತ್ತಿದ್ದೆವು. ಆದರೆ ಜೂನ್ 4ರ ಘಟನೆ ಎಲ್ಲವನ್ನೂ ಬದಲಾಯಿಸಿತು.
ಆ ದಿನ ನಮ್ಮ ಹೃದಯವನ್ನು ಮುರಿಯಿತು. ನಂತರದ ಮೌನವು ಕೇವಲ ನಿಶ್ಯಬ್ದವಲ್ಲ, ಅದು ಶ್ರದ್ಧೆಯಿಂದ ತುಂಬಿದ ಶಾಂತ ಶ್ರದ್ಧಾಂಜಲಿ. ಈ ಮೌನದೊಳಗೆ ನೋವನ್ನು ಅನುಭವಿಸುತ್ತಾ ನಾವು ಆಳವಾಗಿ ಯೋಚಿಸಿದ್ದೆವು ಮತ್ತು ಅನೇಕ ವಿಷಯಗಳನ್ನು ಕಲಿತೆವು. ನೋವನ್ನೇಶ್ರದ್ಧೆಯಾಗಿ, ನಂಬಿಕೆಯಾಗಿರೂಪಿಸಬೇಕೆಂದುತೀರ್ಮಾನಿಸಿದ್ದೆವು.
ಅದರ ಫಲವೇಆರ್‌ಸಿಬಿಕೇರ್ಸ್. ನಮ್ಮ ಅಭಿಮಾನಿಗಳು ಮತ್ತು ಸಮುದಾಯಕ್ಕಾಗಿ ನಿಷ್ಠೆಯಿಂದ ರೂಪಿಸಿದ ಒಂದು ಯೋಜನೆ.
ಇಂದು ನಾವು ಮರಳಿದ್ದೇವೆ. ನಿಮ್ಮೊಂದಿಗೆ ನಿಲ್ಲುವ ಭರವಸೆಯನ್ನು ನೀಡುತ್ತಾ, ಕರ್ನಾಟಕದ ಹೆಮ್ಮೆಯಾಗಿ ಮುಂದೆ ಸಾಗುತ್ತೇವೆ. ಇದು ನಮ್ಮ ಕಾಳಜಿ, ನಮ್ಮ ಪ್ರತಿಜ್ಞೆ.
ಆರ್‌ಸಿಬಿಕೇರ್ಸ್: ನಾವು ಸದಾ ನಿಮ್ಮೊಂದಿಗಿದ್ದೇವೆ.
ಹೆಚ್ಚಿನ ಮಾಹಿತಿ… ಶೀಘ್ರದಲ್ಲೇ.
IPL-19: ಒಂದೇ ವರ್ಷಕ್ಕೆ ಡೆಲ್ಲಿ ಟೀಮ್ ಗೆ ರಾಹುಲ್ ಬೈ ಬೈ? ಈ ತಂಡಕ್ಕೆ ಸೇರ್ಪಡೆ?
Comments are closed.