Mangalore: ಮಂಗಳೂರಿನ ‘ಮಂಗಲ ಕಲಶ’ ಮರುಸ್ಥಾಪನೆ

Mangalore: ಮಹಾವೀರ ವೃತ್ತದಲ್ಲಿ (ಪಂಪ್‌ವೆಲ್) ಮೇಲ್ಸೇತುವೆ ಕಾಮಗಾರಿ ಸಲುವಾಗಿ ತೆರವುಗೊಳಿಸಿದ್ದ ಭಾರಿ ಗಾತ್ರದ ‘ಮಂಗಲ ಕಲಶ’ದ ಆಕೃತಿಯನ್ನು ಮರುಸ್ಥಾಪಿಸಲಾಗುತ್ತಿದೆ. ಅದನ್ನು ಸೋಮವಾರ (ಆ. 25) ರಾತ್ರಿ ಪೀಠದ ಮೇಲೆ ತಂದಿರಿಸಲಾಯಿತು.

ಪಂಪ್‌ವೆಲ್‌ನಲ್ಲಿ ವಿಸ್ತಾರವಾದ ವೃತ್ತವನ್ನು ನಿರ್ಮಿಸಿ, ಅದಕ್ಕೆ ಮಹಾವೀರ ವೃತ್ತ ಎಂದು 2003ರಲ್ಲಿ ನಾಮಕರಣ ಮಾಡಲಾಗಿತ್ತು. ಆ ವೃತ್ತದ ಕೇಂದ್ರದಲ್ಲಿ ಕಲಶದ ಆಕೃತಿಯನ್ನು ಸ್ಥಾಪಿಸಲಾಗಿತ್ತು. ಮಂಗಳೂರು ಜೈನ್ ಸೊಸೈಟಿ ಹಾಗೂ ಜೈನ ಸಮುದಾಯದವರು ಅದರ ಉಸ್ತುವಾರಿ ವಹಿಸಿದ್ದರು.
ರಾಷ್ಟ್ರೀಯ ಹೆದ್ದಾರಿ 66ರ ಮೇಲ್ಸೇತುವೆಯು ಈ ವೃತ್ತದ ಮೇಲೆಯೇ ಹಾದು ಹೋಗಿದ್ದು, ಅದರ ಕಾಮಗಾರಿ ಸಲುವಾಗಿ 2016ರ ಮಾರ್ಚ್‌ನಲ್ಲಿ ಕಲಶದ ಆಕೃತಿಯನ್ನು ತೆರವುಗೊಳಿಸಲಾಗಿತ್ತು. ಈಗ ಮೇಲ್ಸೇತುವೆ ಪಕ್ಕದಲ್ಲಿ ವೃತ್ತಾಕಾರದ ಪೀಠವನ್ನು ರಚಿಸಿ, ಅದರ ಮೇಳೆ ಕಲಶದ ಆಕೃತಿಯನ್ನು ಮರುಸ್ಥಾಪಿಸಲಾಗುತ್ತಿದೆ.
Comments are closed.