Mohan Bhagavat: ನಾನೂ ನಿವೃತ್ತನಾಗಲ್ಲ, ಮೋದಿಗೂ ಪಡೆಯಲು ಹೇಳಿಲ್ಲ – ಮೋಹನ್ ಭಾಗವತ್ ಹೇಳಿಕೆ !!

Share the Article

Mohan Bhagavat : ಬಿಜೆಪಿಯಲ್ಲಿ 75 ವರ್ಷಕ್ಕೆ ನಾಯಕರುಗಳು ನಿವೃತ್ತಿ ಹೊಂದಬೇಕೆಂಬುದು ನಿಯಮ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದಲೇ ಇಳಿಸಲಾಯಿತು. ಇದೀಗ ಪ್ರಧಾನಿ ನರೇಂದ್ರ ಮೋದಿಯವರಿಗೆ 75 ವರ್ಷಗಳು ತುಂಬಿದೆ. ಜೊತೆಗೆ ಬಿಜೆಪಿಯ ಮಾತೃ ಸಂಸ್ಥೆಯಾದ ಆರ್ ಎಸ್ ಎಸ್ ನಾಯಕ ಮೋಹನ್ ಭಾಗವತ್ ಅವರು ಕೂಡ 75ರ ಸನಿಹದಲ್ಲಿದ್ದಾರೆ. ಹೀಗಾಗಿ ಮೋದಿ ಮತ್ತು ಭಾಗವತ್ ನಿವೃತ್ತಿ ಘೋಷಿಸುತ್ತಾರೆ ಎಂಬ ಸುದ್ದಿ ಸಾಕಷ್ಟು ಸದ್ದು ಮಾಡಿತ್ತು. ಆದರೆ ಈಗ ಈ ಕುರಿತು ಭಾಗವತ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಹೌದು, ಆರ್‌ಎಸ್‌ಎಸ್‌ ಶತಮಾನೋತ್ವದ ಹಿನ್ನೆಲೆಯಲ್ಲಿ ದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜಿಸಲಾಗಿದ್ದ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್‌, ಪ್ರಧಾನಿ ಮೋದಿಯವರ ನಿವೃತ್ತಿಯಿಂದ ಹಿಡಿದು ಬಿಜೆಪಿ ಜತೆಗಿನ ನಂಟು ಹಾಗೂ ರಾಷ್ಟ್ರೀಯ ಭಾಷೆಯ ವರೆಗೆ ಹಲವು ವಿಷಯಗಳ ಬಗ್ಗೆ ತಮ್ಮ ನಿಲುವನ್ನು ಹಂಚಿಕೊಂಡಿದ್ದಾರೆ. ಈ ವೇಳೆ ಅವರು 75 ವರ್ಷಕ್ಕೆ ನಿವೃತ್ತಿಯಾಗಬೇಕು ಎಂದು ನಾನು ಯಾರಿಗೂ ಹೇಳಿಲ್ಲ, ನಾನೂ ನಿವೃತ್ತನಾಗುವುದಿಲ್ಲ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಹೇಳಿದ್ದಾರೆ.

75 ವರ್ಷದ ಬಳಿಕ ನಿವೃತ್ತಿ ಪಡೆಯಬೇಕು’ ಎಂಬ ಇತ್ತೀಚಿನ ಮಾತುಗಳು ಮೋದಿ ಉದ್ದೇಶಿಸಿ ಇರಬಹುದು ಎಂಬ ಚರ್ಚೆಗಳ ಬೆನ್ನಲ್ಲೇ ಆ ಕುರಿತ ಪ್ರಶ್ನೆಗಳಿಗೆ ಉತ್ತರಿಸಿರುವ ಭಾಗವತ್, ‘ಅಂದು ನಾನು ಆರ್‌ಎಸ್‌ಎಸ್ ನಾಯಕ ಮೋರೋಪಂತ್ ಪಿಂಗಳೆ ಮಾತುಗಳನ್ನು ನೆನಪಿಸಿಕೊಂಡಿದ್ದೆ ಅಷ್ಟೇ. ಆದರೆ ಯಾವತ್ತೂ ನಾನು ನಿವೃತ್ತನಾಗುತ್ತೇನೆ ಅಥವಾ ಬೇರೆಯವರು ಆಗಲಿ ಎಂದಿರಲಿಲ್ಲ’ ಎಂದರು.

RSS: ಕಾಶಿ, ಮಥುರಾ ದೇವಾಲಯ ವಶಕ್ಕೆ ನಮ್ಮ ಬೆಂಬಲವಿಲ್ಲ – RSS ಘೋಷಣೆ!!

Comments are closed.