ಬೆಂಗಳೂರು: ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್, ಈ 2 ದಿನ ಸಿಗಲ್ಲ ಎಣ್ಣೆ, ಮದ್ಯ ಮಾರಾಟ ನಿಷೇಧ

ಬೆಂಗಳೂರು: ಬೆಂಗಳೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮಗಳ ಕಾರಣ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 31 ಮತ್ತು ಸೆಪ್ಟೆಂಬರ್ 14 ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳು ವಿಷರ್ಜನೆ ನಡೆಯುವುದರಿಂದ ಯಾವುದೇ ಗಲಾಟೆ ನಡೆಯದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
ಕುಡಿದು ಗಲಾಟೆ ಮಾಡುವ ಸಾಧ್ಯತೆ ಇರುವುದರಿಂದ ಮದ್ಯ ಸೇವಿಸಿ ಮೆರವಣಿಗೆಯಲ್ಲಿ ಸಮಸ್ಯೆ ಉಂಟು ಮಾಡುವ ಕಾರಣ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
ಯಶವಂತಪುರ, ಸಂಜಯನಗರ, ಜಾಲಹಳ್ಳಿ, ಆರ್‌ಎಂಸಿ ಯಾರ್ಡ್, ಜೆ.ಸಿ.ನಗರ, ಆರ್.ಟಿ.ನಗರ, ಹೆಬ್ಬಾಳ, ಸದಾಶಿವನಗರ, ತಲಘಟ್ಟಪುರ, ಸುಬ್ರಹ್ಮಣ್ಯಪುರ, ಕೆಂಗೇರಿ, ಜ್ಞಾನಭಾರತಿ, ಕುಂಬಳಗೋಡು, ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ, ಗೋವಿಂದಪುರ, ಬಾಣಸವಾಡಿ, ರಾಮಮೂರ್ತಿನಗರ, ಹೆಣ್ಣೂರು, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಭಾರತಿನಗರ, ಪುಲಿಕೇಶಿನಗರ, ಹಲಸೂರಿನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
ಬೆಂಗಳೂರಿನ ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ CL-4, CL-6 ಪರವಾನಿಗೆ ಹೊರತುಪಡಿಸಿ ಉಳಿದೆಲ್ಲ ಮದ್ಯದಂಗಡಿಗಳನ್ನ ಬಂದ್ ಮಾಡಲು ಸೂಚನೆ ನೀಡಲಾಗಿದೆ. ಎರಡು ದಿನ ರೆಸ್ಟೋರೆಂಟ್, ಹೋಟೆಲ್ ಗಳಲ್ಲಿ ಆಹಾರ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ
ಆಗಸ್ಟ್ 31ರ ಬೆಳಗ್ಗೆ 6ಗಂಟೆಯಿಂದ ಸೆಪ್ಟೆಂಬರ್ 1ರ ಬೆಳಗ್ಗೆ 6 ಗಂಟೆವರೆಗೆ ಪೂರ್ವ ವಿಭಾಗದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಇನ್ನು ಸೆಪ್ಟೆಂಬರ್ 14ರ ಬೆಳಗ್ಗೆ 6 ಗಂಟೆಯಿಂದ ಸೆ.15ರ ಬೆಳಗ್ಗೆ 6 ಗಂಟೆವರೆಗೆ ಕಾಮಾಕ್ಷಿಪಾಳ್ಯ ಹಾಗೂ ವಿಜಯನಗರದಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
Comments are closed.