Mysore dasara: ಹಣೆಗೆ ಕುಂಕುಮ, ಅರಿಶಿಣವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ – ಪ್ರತಾಪ್‌ ಸಿಂಹ

Share the Article

Mysore dasara: ಬಾನು ಮುಷ್ಟಾಕ್ ಅವರೇ ನಿಮ್ಮನ್ನ ಅಲ್ಲಾನೇ ಮಸೀದಿ ಒಳಗೆ ಬಿಟ್ಟಿಲ್ಲ. ಇನ್ನು ಅರಿಶಿಣ ಕುಂಕುಮ ವಿಟ್ಟ ತಾಯಿ ಚಾಮುಂಡೇಶ್ವರಿ ನಿಮ್ಮನ್ನು ಕರೆಸಿಕೊಳ್ತಾಳಾ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್‌ರಿಗೆ ಆಹ್ವಾನ ನೀಡಲಾಗಿದೆ. ಅವರ ಮೇಲೆ ನಮಗೆಲ್ಲ ಗೌರವ ಇದೆ. ಆದರೆ ಹಿಂದೂ ಧಾರ್ಮಿಕ ಶ್ರೇಷ್ಠ ಭಾವನೆಯ ಮುಕುಟವಾಗಿರುವ ದಸರಾ ಉದ್ಘಾಟನೆಯನ್ನು ಅವರ ಕೈಯ್ಯಲ್ಲಿ ಮಾಡಿಸುವ ಅವಶ್ಯಕತೆ ಇತ್ತಾ ಎಂದು ಪ್ರಶ್ನಿಸಿದ್ದಾರೆ.

ಆರಿಶಿಣ, ಕುಂಕುಮ, ಹೂ ವಿಟ್ಟು ದಸರಾ ಉದ್ಘಾಟನೆ ಮಾಡಿ: ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ ಬಾನು ಮುಸ್ತಾಕ್ ಅವರೇ ನಿಮಗೆ ಆತ್ಮಸಾಕ್ಷಿ ಇಲ್ವಾ? ಅದ್ದೇಗೆ ನೀವು ಉದ್ಘಾಟನೆಗೆ ಒಪ್ಪಿಕೊಂಡ್ರಿ? ಬಾನು ಮೇಡಂ ನಿಮ್ಮ ಅಲ್ಲಾನೇ ನಿಮ್ಮನ್ನು ಮಸೀದಿ ಒಳಗೆ ಬಿಟ್ಟಿಲ್ಲ. ಇನ್ನು ನಮ್ಮ ಅರಿಶಿಣ ಕುಂಕುಮವಿಟ್ಟ ಚಾಮುಂಡಿ ನಿಮ್ಮನ್ನು ಬೆಟ್ಟಕ್ಕೆ ಕರೆಸಿಕೊಳ್ಳುತ್ತಾಳಾ? ನೀವು ಸೀರೆಯುಟ್ಟು, ಅರಿಶಿಣ, ಕುಂಕುಮ ಮತ್ತು ಹೂವಿಟ್ಟು ಬಂದು ದಸರಾ ಉದ್ಘಾಟನೆ ಮಾಡೋದಾದ್ರೆ ದಸರಾಗೆ ಬನ್ನಿ ಎಂದಿದ್ದಾರೆ.

ನನ್ನನ್ನು ಮತಾಂತರ ಮಾಡದೇ ಮೆಕ್ಕಾಗೆ ಕಳುಹಿಸ್ತೀರಾ?

ನಾವು ನೆಲ, ಜಲ, ಪರಿಸರದಲ್ಲಿ ದೇವರನ್ನು ಕಾಣುತ್ತೇವೆ. ಇದು ನಮ್ಮ ಧರ್ಮ. ಮರುಭೂಮಿಯ ಮರಳಿನಲ್ಲಿ ಹುಟ್ಟಿದ ಧರ್ಮ ನಮ್ಮದಲ್ಲ. ಬಾನು ಮುಸ್ತಾಕ್ ಅವರೇ ನಿಮಗೆ ನಮ್ಮ ಧರ್ಮದ ಹಬ್ಬವನ್ನು ಉದ್ಘಾಟನೆ ಮಾಡಲು ಮನಸ್ಸಾದ್ರೂ ಹೇಗೆ ಒಪ್ಪುತ್ತೆ? ವಿವಿಧತೆಯಲ್ಲಿ ಏಕತೆ ಬರೀ ಹಿಂದೂಗಳಲ್ಲಿ ಮಾತ್ರ. ಆದರೆ ಮುಸ್ಲಿಂ, ಕ್ರಿಶ್ಚಿಯನ್ನರಲ್ಲಿ ಇದು ಇಲ್ಲ. ನಾವು ಹೆಣ್ಣು ಮಕ್ಕಳಲ್ಲಿ ದೇವಿಯಲ್ಲಿ ಕಾಣುತ್ತೇವೆ. ನಿಮ್ಮ ಧರ್ಮದಲ್ಲಿ ಹೆಣ್ಣನ್ನು ಭೋಗದ ವಸ್ತುವಾಗಿ ಬಳಸಿಕೊಳ್ಳುತ್ತೀರಾ. ನನ್ನನ್ನು ಮತಾಂತರ ಮಾಡದೇ, ಸುನ್ನತ್ ಮಾಡಿಕೊಳ್ಳದೆ ಬರೀ ಪ್ರವಾಸಿಗನಾಗಿ ಮೆಕ್ಕಾಗೆ ಕಳುಹಿಸಿಕೊಡ್ತೀರಾ? ಇಲ್ಲ ಎಂದಾದರೆ ನೀವು ಹೇಗೆ ನಮ್ಮ ಸಂಸ್ಕೃತಿಯನ್ನು ಪಾಲಿಸದೆ ದಸರಾ ಉದ್ಘಾಟನೆಗೆ ಬರ್ತಿರಾ ಎಂದು ಕೇಳಿದ್ದಾರೆ.

Comments are closed.