GST: ಜಿಎಸ್‌ಟಿ ಸರಳೀಕರಣ: ರಾಜ್ಯಗಳ ಆದಾಯ 2.5 ಲಕ್ಷ ಕೋಟಿ ನಷ್ಟ ಸಾಧ್ಯತೆ – ಸಚಿವ ಕೃಷ್ಣ ಬೈರೇಗೌಡ ಕಳವಳ

Share the Article

GST: ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಜಿಎಸ್‌ಟಿ ಸರಳೀಕರಣ ವ್ಯವಸ್ಥೆಯಿಂದ ರಾಜ್ಯಗಳ ಆದಾಯ 85,000 ಕೋಟಿಯಿಂದ 1 2.5 ಲಕ್ಷ ಕೋಟಿವರೆಗೆ ನಷ್ಟ ಉಂಟಾಗಲಿದ್ದು, ಜಿಎಸ್‌ಟಿ ಸ್ಥಿರಗೊಳ್ಳುವವರೆಗೆ ಜಿಎಸ್ಟಿ ಕೌನ್ಸಿಲ್ ನಷ್ಟ ಪರಿಹಾರ ನೀಡಲಿ ಎಂದು ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದರು.

ಜಿಎಸ್‌ಟಿ ಸರಳೀಕರಣ ಹಾಗೂ ರಾಜ್ಯಗಳ ಸ್ವಾಯತ್ತತೆಗೆ ಸಂಬಂಧಿಸಿ ದೆಹಲಿಯ ಕರ್ನಾಟಕ ಭವನದಲ್ಲಿ ಸಮಾನ ಮನಸ್ಕ ಎಂಟು ರಾಜ್ಯಗಳ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ತಮಿಳುನಾಡು ಹಣಕಾಸು ಸಚಿವ ತಂಗಮ್ ತನ್ನರಸು, ಹಿಮಾಚಲ ಪ್ರದೇಶದ ಹಣಕಾಸು ಸಚಿವ ರಾಜೇಶ್ ಧರ್ಮನಿ, ಜಾರ್ಖಂಡ್ ಹಣಕಾಸು ಸಚಿವ ರಾಧಾ ಕೃಷ್ಣ ಕಿಶೋರ್, ಪಂಜಾಬ್ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ. ಕೇರಳ ಹಣಕಾಸು ಸಚಿವ ಬಾಲ ಗೋಪಾಲ್. ತೆಲಂಗಾಣ ಹಣಕಾಸು ಸಚಿವ ಮಲ್ಲು ಭಟ್ಟಿ ವಿಕ್ರಮಾರ್ಕ, ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ವಲಯ ಅಧಿಕಾರಿ ಉಜೈನಿ ದತ್ತ ಪಾಲ್ಗೊಂಡಿದ್ದರು.

ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ಜಿಎಸ್‌ಟಿ ಕೌನ್ಸಿಲ್ ನಮ್ಮ ಮುಂದಿಟ್ಟಿರುವ ಜಿಎಸ್‌ಟಿ ತೆರಿಗೆ ಸರಳೀಕರಣ ವ್ಯವಸ್ಥೆಯನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಈ ವ್ಯವಸ್ಥೆ ರಾಜ್ಯಗಳ ತೆರಿಗೆ ಆದಾಯವನ್ನು ರಕ್ಷಿಸುವಂತಿರಬೇಕು ಹಾಗೂ ಇದರ ಸಂಪೂರ್ಣ ಲಾಭ ದೇಶದ ಜನಸಾಮಾನ್ಯರಿಗೆ ಸಿಗುವಂತಿರಬೇಕೇ ಹೊರತು ಕೆಲವು ಕಂಪನಿಗಳಿಗೆ ಮಾತ್ರ ಲಾಭಆಗುವಂತಿರಬಾರದು ಎಂದು ಅಭಿಪ್ರಾಯಪಟ್ಟರು.

ರಾಜ್ಯಗಳಿಗೆ ಅಧಿಕ ನಷ್ಟವಾದರೆ ಅಂತಿಮವಾಗಿ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗುತ್ತಾರೆ. ರಾಜ್ಯಗಳ ಸ್ವಾಯತ್ತತೆ ತುಂಬಾ ಮುಖ್ಯವಾದ ವಿಚಾರ, ಪ್ರತಿಯೊಂದು ರಾಜ್ಯಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸುಸ್ಥಿರ ಆದಾಯ ಅತ್ಯಂತ ಮುಖ್ಯ ಆದರೆ, ಆದಾಯ ಕೊರತೆ ಉಂಟಾಗಿ ಸ್ವಂತ ಸರ್ಕಾರ ನಡೆಸಲು ಕೇಂದ್ರದ ಕಡೆ ಕೈಚಾಚುವಂತಾದರೆ ರಾಜ್ಯಗಳ ಸ್ವಾಯತ್ತೆ ಎಂಬ ಪದವೇ ಅರ್ಥ ಕಳೆದುಕೊಳ್ಳುತ್ತದೆ. ಸಹಕಾರಿ ಒಕ್ಕೂಟವಾದ ಪದಗಳಲ್ಲಿ ಮಾತ್ರವಲ್ಲದೆ ಕೆಲಸದಲ್ಲೂ ಚಾಲ್ತಿ ಇದ್ದರೆ ಮಾತ್ರ ಸ್ವಾಯತ್ತತೆ ಉಳಿಯಲು ಸಾಧ್ಯ ಎಂದು ವ್ಯಾಖ್ಯಾನಿಸಿದರು.

GATE: 2026ರ “GATE” ಪರೀಕ್ಷೆಯ ನೋಂದಣಿ ಪ್ರಕ್ರಿಯೆ ಆರಂಭ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Comments are closed.