Stampede: RCB: ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 25 ಲಕ್ಷ ರೂ. ನೀಡಿದ RCB!

Stampede: ಜೂನ್ 4, 2025 ರಂದು ಬೆಂಗಳೂರಿನಲ್ಲಿ ನಡೆದ RCB ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಅಭಿಮಾನಿಗಳು ಸಾವಿಗೀಡಾಗಿದ್ದರು. ಈ ದುರ್ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಸಹಾಯಹಸ್ತ ನೀಡಿದೆ.

ಅದರಂತೆ ಆರ್ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ ಮೃತಪಟ್ಟ ಪ್ರತಿ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಆರ್ಥಿಕ ಸಹಾಯ ನೀಡಿರುವುದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಅಧಿಕೃತವಾಗಿ ಪ್ರಕಟಿಸಿದೆ.
ಜೊತೆಗೆ ಅಭಿಮಾನಿಗಳ ಸಾವಿನ ಬೆನ್ನಲ್ಲೇ ಆರ್ಸಿಬಿ ಕೇರ್ಸ್ ಶುರು ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಇದೀಗ ಮೃತಪಟ್ಟ ಕುಟುಂಬಗಳಿಗೆ ಧನ ಸಹಾಯ ನೀಡಿದೆ. ಅಲ್ಲದೆ ಆರ್ಸಿಬಿ ಕೇರ್ಸ್ ಮೂಲಕ ಮತ್ತಷ್ಟು ಸಹಾಯಹಸ್ತ ನೀಡುವ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸುವ ಭರವಸೆಯನ್ನು ಸಹ ನೀಡಿದ್ದಾರೆ. ಜೊತೆಗೆ ಭಾವುಕ ಪೋಸ್ಟ್ ಕೂಡಾ ಹಂಚಿಕೊಂಡಿದ್ದಾರೆ.
Comments are closed.