Shivamogga: ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

Share the Article

Shivamogga: 9 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

ಹೊಟ್ಟೆ ನೋವು ಎಂದು ಬಾಲಕಿ ಶಾಲೆಗೆ ರಜೆ ಹಾಕಿದ್ದು, ಎರಡು ದಿನದ ನಂತರ ಮನೆಯಲ್ಲಿಯೇ ಮಗುವಿನ ಜನ್ಮ ನೀಡಿದ್ದಾಳೆ. ಕೂಡಲೇ ಆಕೆಯನ್ನು ಕುಟುಂಬಸ್ಥರು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. 7 ತಿಂಗಳಿಗೆ ಮಗು ಜನಿಸಿದ್ದು, 1.8 ಕೆಜಿ ತೂಕವಿದ್ದು, ಬಾಲಕಿ ಹಾಗೂ ಮಗು ಆರೋಗ್ಯವಾಗಿದ್ದಾರೆ.

ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ ಸಿಬ್ಬಂದಿ, ಪೊಲೀಸರು ದೂರು ದಾಖಲು ಮಾಡಿಕೊಂಡು ಬಾಲಕಿಯ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಬಾಲಕಿ ತನ್ನ ಮೇಲೆ ನಡೆದ ದೌರ್ಜನ್ಯದ ಕುರಿತು ಗೊಂದಲದ ಹೇಳಿಕೆ ನೀಡಿರುವ ಕುರಿತು ವರದಿಯಾಗಿದೆ.

ಬಾಲಕಿಯನ್ನು ಕೌನ್ಸಲಿಂಗ್‌ ಮಾಡಿ ನಂತರ ಹೆಚ್ಚಿನ ವಿಚಾರಣೆ ಮಾಡಲಾಗುವುದು ಎಂದು ನಿರ್ಧಾರ ಮಾಡಲಾಗಿದೆ ಎಂದು ವರದಿಯಾಗಿದೆ.

Tamilunadu : ಇನ್ಮುಂದೆ ದೇವಾಲಯಗಳ ಹಣ ಸರ್ಕಾರಕ್ಕೆ ಸೇರಿದಲ್ಲ, ಈ ಕಾರ್ಯಕ್ಕೆ ಮಾತ್ರ ಬಳಸಬೇಕು – ಹೈ ಕೋರ್ಟ್ ಕಟ್ಟಪ್ಪಣೆ !!

Comments are closed.