Weather Report: ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಎಚ್ಚರಿಕೆ: ರಾಜ್ಯಕ್ಕೆ ವಾಯುಭಾರ ಕುಸಿತದ ಎಫೆಕ್ಟ್ ಏನು?

Weather Report: ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಮಂಗಳವಾರ ಭಾರಿ ಮಳೆಯಾಗಬಹುದೆಂದು ಐಎಂಡಿ ಎಚ್ಚರಿಕೆ ನೀಡಿದೆ. ಕರ್ನಾಟಕ, ಒಡಿಶಾ, ಪಂಜಾಬ್ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಸ್ಸಾಂ, ಮೇಘಾಲಯ, ಛತ್ತೀಸ್‌ಗಢ, ಆಂಧ್ರಪ್ರದೇಶ, ರಾಜಸ್ಥಾನ, ಗುಜರಾತ್, ಹರಿಯಾಣ, ಚಂಡೀಗಢ, ದೆಹಲಿ, ಕೇರಳ, ಗೋವಾ, ಮಧ್ಯಪ್ರದೇಶ, ಮಿಜೋರಾಂ, ತ್ರಿಪುರ, ಸಿಕ್ಕಿಂ, ತೆಲಂಗಾಣ ಮತ್ತು ಉತ್ತರ ಪ್ರದೇಶಗಳಲ್ಲಿಯೂ ಭಾರಿ ಮಳೆಯಾಗುವ ಸಂಭವವಿದೆ.

ಮುಂದಿನ 7 ದಿನಗಳಲ್ಲಿ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 02-06ರ ಅವಧಿಯಲ್ಲಿ ಅಸ್ಸಾಂ ಮತ್ತು ಮೇಘಾಲಯ, ಸೆಪ್ಟೆಂಬರ್ 05 ಮತ್ತು 06ರ ಅವಧಿಯಲ್ಲಿ ಅರುಣಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 5 ದಿನಗಳಲ್ಲಿ ಹಲವು ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರ/ಮಧ್ಯಮ ಮಳೆಯಾಗುವ ಸಾಧ್ಯತೆ.
ಮುಂದಿನ 7 ದಿನಗಳಲ್ಲಿ ಕೇರಳ ಮತ್ತು ಮಾಹೆ ಮತ್ತು ಕರಾವಳಿ ಕರ್ನಾಟಕದ ಮೇಲೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಕರ್ನಾಟಕದಲ್ಲಿ ಸೆಪ್ಟೆಂಬರ್ 01-03ರ ಅವಧಿಯಲ್ಲಿ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ; ಸೆಪ್ಟೆಂಬರ್ 01-02 ರಂದು ತೆಲಂಗಾಣ, ಸೆಪ್ಟೆಂಬರ್ 02 ಮತ್ತು 03 ರಂದು ಕರಾವಳಿ ಕರ್ನಾಟಕದ ಮೇಲೆ ಭಾರಿ ಮಳೆಯಾಗುವ ಸಾಧ್ಯತೆ. ಮುಂದಿನ 5 ದಿನಗಳಲ್ಲಿ ಈ ಪ್ರದೇಶದ ಕೆಲವು ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯಲಿದ್ದು, ಸೆಪ್ಟೆಂಬರ್ 2ರಿಂದ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. ಈ ಮಳೆಯು ಸೆಪ್ಟೆಂಬರ್ 6ರ ತನಕ ಇರಲಿದ್ದು, ನಂತರ ಕಡಿಮೆಯಾಗುವ ಲಕ್ಷಣಗಳಿವೆ. ಉತ್ತರ ಥೈಲಾಂಡ್ ನಲ್ಲಿ ಈಗಾಗಲೇ ವಾಯುಭಾರ ಕುಸಿತ ಉಂಟಾಗಿದ್ದು, ಸೆಪ್ಟೆಂಬರ್ 2ರ ವೇಳೆಗೆ ಒಡಿಸ್ಸಾ ಕರಾವಳಿ ತಲಪುವ ನಿರೀಕ್ಷೆಯಿದೆ. ಇದರ ಪರಿಣಾಮದಿಂದ ರಾಜ್ಯದ ಕರಾವಳಿಯಲ್ಲಿ ಮಳೆ ಹೆಚ್ಚಾಗುವ ಸೂಚನೆಗಳಿವೆ.
Comments are closed.