Droupadi Murmu: ಮೈಸೂರಿಗೆ ಇಂದು ರಾಷ್ಟ್ರಪತಿ ಆಗಮನ – ಎರಡು ದಿನಗಳ ಮೈಸೂರು ಪ್ರವಾಸ ಕೈಗೊಂಡಿರುವ ದೌಪದಿ ಮುರ್ಮು

Share the Article

Droupadi Murmu: ಎರಡು ದಿನಗಳ ಮೈಸೂರು ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ದೌಪದಿ ಮುರ್ಮು ಅವರು ಇಂದು ಮಧ್ಯಾಹ್ನ 3.10ಕ್ಕೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಆಯಿಷ್ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಚಾಮುಂಡಿಬೆಟ್ಟಕ್ಕೆ ತೆರಳಿ ದರ್ಶನ ಪಡೆದು, ಮೈಸೂರಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಮೈಸೂರಿಗೆ ಮೂರು ವರ್ಷದ ನಂತರ ರಾಷ್ಟ್ರಪತಿ ದೌಪದಿ ಮುರ್ಮು ಆಗಮಿ ಸುತ್ತಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಎರಡು ದಿನದ ಪ್ರವಾಸದ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳನ್ನು ಬರಮಾಡಿಕೊಳ್ಳಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಳ್ಳ ಲಾಗಿದ್ದು, ಕಳೆದ ಎರಡು ದಿನಗಳಿಂದ ಭದ್ರತೆಯನ್ನು ಪರಿಶೀಲಿಸಲಾಗಿದೆ.

ದೆಹಲಿಯಿಂದ ನೇರವಾಗಿ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ: ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರು ಇಂದು ಮಧ್ಯಾಹ್ನ 12 ಗಂಟೆಗೆ ದೆಹಲಿಯ ರಾಷ್ಟ್ರಪತಿ ಭವನದಿಂದ ಹೊರಟು, 12.25ಕ್ಕೆ ದೆಹಲಿಯ ಪಾಲಂ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಮೈಸೂರಿನತ್ತ ಪ್ರಯಾಣಿಸಲಿದ್ದಾರೆ. 2 ಗಂಟೆ 45 ನಿಮಿಷದ ಪ್ರಯಾಣದ ನಂತರ ಮಧ್ಯಾಹ್ನ 3.10ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಫಾವರ್‌ಚಂದ್ ಗೆಹೋಟ್, ಮುಖ್ಯ ಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತು ವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಸೇರಿದಂತೆ ಶಿಷ್ಟಾಚಾರದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡು ರಾಷ್ಟ್ರಪತಿಗಳನ್ನು ಬರ ಮಾಡಿಕೊಳ್ಳಲಿದ್ದಾರೆ.

ರಾಷ್ಟ್ರಪತಿಗಳು ಸಂಜೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಲಿರುವುದರಿಂದ ಇಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8.30ರವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರು, ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. ತಾವರೆ ಕಟ್ಟೆ, ಉತ್ತನಹಳ್ಳಿ ರಸ್ತೆಯಿಂದ ಬರುವ ವಾಹನಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ರಾತ್ರಿ 8.30ರ ನಂತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.

ಅರಮನೆಗೆ ಇಂದು ಪ್ರವಾಸಿಗರು, ಸಾರ್ವಜನಿಕರ ಪ್ರವೇಶ ಪ್ರವೇಶ ನಿಷೇಧಿಸಲಾಗಿದೆ. ಸೆ.2ರಂದು ಬೆಳಗ್ಗೆ 8.30ಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು ಅವರು ಅರಮನೆಗೆ ಭೇಟಿ ನೀಡಿ, ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಏರ್ಪಡಿಸಿರುವ ಉಪಾಹಾರ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 8.30ರಿಂದ 10ರವರೆಗೆ ರಾಷ್ಟ್ರಪತಿಗಳು ಅರಮನೆಯಲ್ಲಿಯೇ ಇರುವುದರಿಂದ ಅಂದು ಬೆಳಗ್ಗಿನಿಂದ 11.30ರವರೆಗೂ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. 11.30ರ ನಂತರ ಆರಮನೆ ವೀಕ್ಷಣೆಗೆ ಅವಕಾಶ ನೀಡಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ತಿಳಿಸಿದೆ.

ಬಳಿಕ ಮಧ್ಯಾಹ್ನ 3.20ಕ್ಕೆ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗದಲ್ಲಿ ರಿಂಗ್ ರಸ್ತೆಯಲ್ಲಿ ಸಾಗಿ, ಬೋಗಾದಿ ರಿಂಗ್ ರಸ್ತೆ ಜಂಕ್ಷನ್ ಮೂಲಕ ಮಧ್ಯಾಹ್ನ 3.45ಕ್ಕೆ ಗಂಗೋತ್ರಿ ಬಡಾವಣೆಯಲ್ಲಿರುವ ಆಯಿಷ್ ಸಂಸ್ಥೆ ಆವರಣಕ್ಕೆ ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ಆರಂಭವಾಗುವ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ(ಆಯಿಷ್) ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವಜ್ರ ಮಹೋತ್ಸವದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರದ ಆರೋಗ್ಯ ಮತ್ತು ಕುಟುಂಬ ಇಲಾಖೆಯ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಆಯಿಷ್ ಹಿರಿಯ ಅಧಿಕಾರಿ ಗಳು ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮ ಮುಗಿದ ನಂತರ ಸಂಜೆ 5 ಗಂಟೆಗೆ ಆಯಿಷ್ ಸಂಸ್ಥೆಯಿಂದ ನಿರ್ಗಮಿಸಲಿದ್ದಾರೆ. ನಂತರ ಕ್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಕೆಲಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಸಂಜೆ 6.30ಕ್ಕೆ ಚಾಮುಂಡಿಬೆಟ್ಟಕ್ಕೆ ತೆರಳಿ ದೇವಿ ದರ್ಶನ ಪಡೆಯಲಿದ್ದಾರೆ. ಬಳಿಕ ವಾಪಸ್ಸಾಗಿ ಬ್ಯಾಡಿಸನ್ ಬ್ಲೂ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ರಾಷ್ಟ್ರಪತಿ ದೌಪದಿ ಮುರ್ಮು ಅವರು 2022ರಲ್ಲಿ ನಾಡಹಬ್ಬ ದಸರಾ ಮಹೋ ತ್ಸವ ಉದ್ಘಾಟಿಸಲು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದು, ಇದೀಗ ಎರಡನೇ ಬಾರಿಗೆ ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಾರೆ.

Temples : ಭಾರತದಲ್ಲಿ ಸರ್ಕಾರದ ಅಧೀನದಲ್ಲಿರುವ ದೇವಾಲಯಗಳೆಷ್ಟು? ವಾರ್ಷಿಕವಾಗಿ ಇವುಗಳಿಂದ ಬರುತ್ತೆ ಲಕ್ಷ, ಲಕ್ಷ ಕೋಟಿ ಆದಾಯ !!

Comments are closed.