Priyank Kharge: ಧರ್ಮಸ್ಥಳ ಪ್ರಕರಣ – ಇದು RSS ವಿರುದ್ಧ RSS ಹೋರಾಟ : ಪ್ರಿಯಾಂಕ್ ಖರ್ಗೆ!!

Priyank Kharge: ಧರ್ಮಸ್ಥಳದಲ್ಲಿ ಧರ್ಮ ಸಂರಕ್ಷಣೆ ಯಾತ್ರೆಯನ್ನು ಹಮ್ಮಿಕೊಂಡಿರುವ ಬಿಜೆಪಿ ನಾಯಕರನ್ನು ಸಚಿವ ಪ್ರಿಯಾಂಕ ಖರ್ಗೆ ಅವರು ಟೀಕಿಸಿದ್ದು, ಧರ್ಮಸ್ಥಳ ಪ್ರಕರಣದಲ್ಲಿ ಹೋರಾಟ ನಡೆಸುತ್ತಿರುವ ಗಿರೀಶ್ ಮಟ್ಟಣ್ಣವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಅವರು ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರ ಬಣದವರಲ್ಲವೇ? ಅವರ ಅಣತಿಯಂತೆಯೇ ಇವರ ಹೋರಾಟ ನಡೆಯುತ್ತಿರುವುದಲ್ಲವೇ? ಹಾಗಾಗಿ ಇದು ಆರ್ ಎಸ್ ಎಸ್ ವಿರುದ್ಧ ಆರ್ ಎಸ್ ಎಸ್ ಹೋರಾಟದ ಪ್ರತಿಫಲ ಎಂದು ಕುಟುತ್ತಿದ್ದಾರೆ.

ಹೌದು, ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಕುರಿತು ಸುಧೀರ್ಘವಾಗಿ ಬರೆದು ಪೋಸ್ಟ್ ಹಂಚಿಕೊಂಡ ಪ್ರಿಯಾಂಕ ಖರ್ಗೆ ಅವರು ಬಿಜೆಪಿಯ ʼಧರ್ಮಸ್ಥಳ ಚಲೋʼ ವೇದಿಕೆಯಲ್ಲಿ ಕರಾವಳಿಯ ಭಾಗದ ನಾಯಕರು ಮಾತನಾಡದೆ ವೇದಿಕೆ ಬಿಟ್ಟು ಹೋಗಿದ್ದೇಕೆ? ಕಲ್ಲಡ್ಕ ಪ್ರಭಾಕರ್ ಭಟ್ ಕಾಣಿಸಿಕೊಂಡಿಲ್ಲ ಏಕೆ? ಇದುವರೆಗೂ ಪ್ರಭಾಕರ್ ಭಟ್ ಧರ್ಮಸ್ಥಳದ ಪರವಾಗಿ ಒಂದೇ ಒಂದು ಹೇಳಿಕೆ ನೀಡದಿರುವುದೇಕೆ? ಕಲ್ಲಡ್ಕ ಭಟ್ಟರಿಗೆ ʼಧರ್ಮಸ್ಥಳʼ ಬೇಡವಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.
ಧರ್ಮಸ್ಥಳ ಪರ-ವಿರೋಧ ಹೋರಾಟದಲ್ಲಿ ಬಿಜೆಪಿ ಎರಡು ತಲೆ ಹಾವಿನಂತೆ ವರ್ತಿಸುತ್ತಿದೆ. ವಿರೋಧಿಸುವವರೂ ಅವರೇ, ಪರವಾಗಿ ಹೋರಾಟ ಮಾಡುವವರೂ ಅವರೇ. ಧರ್ಮಸ್ಥಳ ವಿಚಾರವಾಗಿ ಚಿವುಟಿರುವುದೂ ಬಿಜೆಪಿಯೇ, ತೊಟ್ಟಿಲು ತೂಗುತ್ತಿರುವುದು ಬಿಜೆಪಿಯೇ, ಅವರ ದ್ವಿಪಾತ್ರಾಭಿನಯಕ್ಕೆ ಆಸ್ಕರ್ ಪ್ರಶಸ್ತಿ ಕಡಿಮೆಯೇ ಎಂದು ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.
ಅಲ್ಲದೆ”ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ಎಂಬ ಎರಡು ತಲೆಯ ಹಾವು ಎರಡು ಕಡೆಯೂ ಹೆಡೆ ಆಡಿಸುತ್ತಿದೆ, ಬಿಜೆಪಿ ಆರೋಪಿಸುತ್ತಿರುವ ವ್ಯಕ್ತಿಗಳೂ ಬಿಜೆಪಿಯವರೇ. ಗಿರೀಶ್ ಮಟ್ಟಣ್ಣನವರು ಬಿಜೆಪಿಯ ಸಕ್ರಿಯ ಕಾರ್ಯಕರ್ತ, ಯುವಮೋರ್ಚಾದ ಅಧ್ಯಕ್ಷರಾಗಿದ್ದವರು, 2013ರಲ್ಲಿ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದವರು. ಮಹೇಶ್ ಶೆಟ್ಟಿ ತಿಮರೋಡಿ ಅವರು, ಬಿಜೆಪಿ ಪಕ್ಷದಲ್ಲೇ ಇದ್ದವರು, ಸಂಘಪರಿವಾರದ ನಾಯಕರು, ಪ್ರತಿಬಾರಿಯೂ ಸಾವರ್ಕರ್, ಗೋಲ್ವಾಲ್ಕರ್ ಫೋಟೋ ಇಟ್ಟುಕೊಂಡಿರುವವರು, ಕೇಸರಿ ಶಾಲು ಹಾಕಿಕೊಂಡಿರುವವರು. ಸಾವರ್ಕರ್ ಅನುಯಾಯಿಯ ಬಗ್ಗೆಯೇ ಬಿಜೆಪಿಗೆ ಅಸಹನೆ ಹೊಂದಿರುವುದು ಪರಮಾಶ್ಚರ್ಯ,” ಎಂದು ಖರ್ಗೆ ವ್ಯಂಗ್ಯವಾಡಿದ್ದಾರೆ.
ಅಲ್ಲದೆ ಇದು ಪಕ್ಕಾ RSS ವಿರುದ್ಧ RSS ಹೋರಾಟ. ಬಿಜೆಪಿಯವರಿಗೆ ಯಾವ ಆರೆಸೆಸ್ ನವ್ರಿಗೆ ತಲೆ ಬಾಗಬೇಕು ಅಂತ ಗೊತ್ತಾಗ್ತಿಲ್ಲ.ಆರೆಸೆಸ್ ಬಣಗಳಿಗೆ ಖುಷಿ ಪಡಿಸಲು ಬಿಜೆಪಿಯವ್ರು ಇದೆಲ್ಲ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಚಿವುಟುವುದೂ ಬಿಜೆಪಿ, ತೊಟ್ಟಿಲು ತೂಗುವುದೂ ಬಿಜೆಪಿ!
ಧರ್ಮಸ್ಥಳ ಪ್ರಕರಣದಲ್ಲಿನ ಬಿಜೆಪಿಯ ದ್ವಿಪಾತ್ರಾಭಿನಯಕ್ಕೆ ಆಸ್ಕರ್ ಕೊಟ್ಟರೂ ಕಡಿಮೆಯೇ!ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯ ಎಂಬ ಎರಡು ತಲೆಯ ಹಾವು ಎರಡು ಕಡೆಯೂ ಹೆಡೆ ಆಡಿಸುತ್ತಿದೆ,
ಬಿಜೆಪಿ ಆರೋಪಿಸುತ್ತಿರುವ ವ್ಯಕ್ತಿಗಳೂ ಬಿಜೆಪಿಯವರೇ,
– ಗಿರೀಶ್ ಮಟ್ಟಣ್ಣನವರ್,
ಬಿಜೆಪಿಯ ಸಕ್ರಿಯ…— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) September 2, 2025
WORLD CUP: ಮಹಿಳಾ ಏಕದಿನ ವಿಶ್ವಕಪ್‌ನ ಬಹುಮಾನ ಹಣ ಏರಿಕೆ: ಮೊತ್ತವನ್ನು 4 ಪಟ್ಟು ಹೆಚ್ಚಳ ಮಾಡಿದ ಐಸಿಸಿ
Comments are closed.