Weather Report: ನಾಳೆ ಬೆಳಿಗ್ಗೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ: ಎತ್ತ ಸಾಗಿತು ಚಂಡ ಮಾರುತ? ಎಲ್ಲೆಲ್ಲಿ ಮಳೆ?

Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಸಿಲು, ಮೋಡ ಹಾಗೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಳೆ ಬಿಡುವಿನ ಅಂತರ ಸ್ವಲ್ಪ ಕಡಿಮೆ ಇರಬಹುದು.

ಈಗಿನಂತೆ ಭಾರಿ ಮಳೆಯ ಸಾಧ್ಯತೆಗಳು ಕ್ಷೀಣಿಸುತ್ತಿದ್ದು, ಬಿಟ್ಟು ಬಿಟ್ಟು ಸಾಮಾನ್ಯ ಮಳೆಯು ಸೆಪ್ಟೆಂಬರ್ 7ರ ತನಕ ಮುಂದುವರಿಯುವ ಮುನ್ಸೂಚನೆ ಇದೆ. ನಂತರ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಸೆಪ್ಟೆಂಬರ್ 7ರ ತನಕ ಬಿಸಿಲಿನೊಂದಿಗೆ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು.
ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ, ವಿಜಯನಗರ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಸೆಪ್ಟೆಂಬರ್ 3ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿಗೆ ತಲುಪಿರುವ ವಾಯುಭಾರ ಕುಸಿತವು ಅಲ್ಲೇ ಶಿಥಿಲಗೊಳ್ಳುವ ಲಕ್ಷಣವಿರುವುದರಿಂದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಭಾರಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸೂಚನೆಗಳಿವೆ. ಮುಂಗಾರು ದುರ್ಬಲತೆ ಮುಂದುವರಿಯಲಿದೆ.
Comments are closed.