Healthy food: ಹೃದಯಾಘಾತದ ಅಪಾಯ ಕಡಿಮೆ ಮಾಡುವ ಬೀಜಗಳಿವು!

Healthy food: ಇತ್ತೀಚಿಗೆ ಹೃದಯಾಘಾತ ಮತ್ತು ಹೃದಯ ಸ್ತಂಭನದಂತಹ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಹೃದಯ ಆರೋಗ್ಯ ಚೆನ್ನಾಗಿರಬೇಕು ಎಂದರೆ ಆರೋಗ್ಯಕಾರಿ ಜೀವನಶೈಲಿಯ ಜೊತೆಗೆ ದೈನಂದಿನ ಆಹಾರ (Healthy food) ಪದ್ಧತಿಯಲ್ಲಿಯೂ ಕೂಡಾ ಕೆಲವು ಬದಲಾವಣೆ ಇರಬೇಕು.

• ಎಳ್ಳು
ಎಳ್ಳು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.
• ಕಡಲೆಕಾಯಿ
ಕಡಲೆಕಾಯಿಯಲ್ಲಿ ಪ್ರೋಟೀನ್, ಆರೋಗ್ಯಕರ ಕೊಬ್ಬು ಮತ್ತು ವಿಟಮಿನ್ ಬಿ ಸಮೃದ್ಧವಾಗಿದೆ. ಪ್ರತಿದಿನ ಸೀಮಿತ ಪ್ರಮಾಣದಲ್ಲಿ ಕಡಲೆಕಾಯಿ ಯನ್ನು ತಿನ್ನುವುದರಿಂದ ಹೃದಯದ ಆರೋಗ್ಯ ಮತ್ತು ರಕ್ತ ಪರಿಚಲನೆ ಉತ್ತಮವಾಗಿರುತ್ತದೆ.
• ಮೆಂತ್ಯ ಬೀಜಗಳು
ಮೆಂತ್ಯ ಬೀಜಗಳು ದೇಹವನ್ನು ನಿರ್ವಿಷಗೊಳಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ. ನೆನೆಸಿದ ಅಥವಾ ಮೊಳಕೆಯೊಡೆದ ನಂತರ ಅವುಗಳನ್ನು ತಿನ್ನುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ.
• ಚಿಯಾ ಬೀಜಗಳು:
ಚಿಯಾ ಬೀಜಗಳಲ್ಲಿ ಅಧಿಕ ಪ್ರಮಾಣದಲ್ಲಿ ನಾರಿನಾಂಶ ಹಾಗೂ ಪ್ರಬಲ ಆಂಟಿ ಆಕ್ಸಿಡೆಂಟ್ ಅಂಶಗಳು ಇರುವುದರಿಂದ ರಕ್ತದ ಹರಿವನ್ನು ಸುಧಾರಿಸುತ್ತದೆ. ಇನ್ನು ಇವು ಕೆಟ್ಟ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುವುದರ ಜೊತೆಗೆ ಅನಿಯಮಿತ ಹೃದಯದ ಬಡಿತದ ಸಮಸ್ಯೆಯನ್ನು ನಿಯಂತ್ರಣದಲ್ಲಿಡುತ್ತದೆ. ಹೀಗಾಗಿ ರಾತ್ರಿ ಮಲಗುವ ಮುನ್ನ ಸ್ವಲ್ಪ ಚಿಯಾ ಬೀಜಗಳನ್ನು ನೀರಿನಲ್ಲ ನೆನೆಸಿಟ್ಟು ಮರುದಿನ ಬೆಳಗ್ಗೆ ಖಾಲಿಹೊಟ್ಟೆಗೆ ನೀರಿನ ಜೊತೆಗೇ ಸೇವಿಸಬೇಕು.
• ಅಗಸೆ ಬೀಜಗಳು
ಅಗಸೆ ಬೀಜಗಳು ಒಮೆಗಾ-3 ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿವೆ. ಅವು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ನೀವು ಪುಟ್ಟ ಬೀಜಗಳನ್ನು ಸ್ಮೂಥಿಗಳಲ್ಲಿ ಅಥವಾ ಸಲಾಡ್‌ಗಳಲ್ಲಿ ಬೆರೆಸಿ ಪ್ರತಿದಿನ ತಿನ್ನಬಹುದು.
ಇದನ್ನೂ ಓದಿ:PENSION: ಯಾವ ದಾಖಲೆ ನೀಡದಿದ್ರೆ ಪಿಂಚಣಿ ನಿಲ್ಲುತ್ತದೆ? ಕೊಡಬೇಕಾದ ದಾಖಲೆಗಳು ಯಾವುದು?
• ಕುಂಬಳಕಾಯಿ ಬೀಜಗಳು
ಕುಂಬಳಕಾಯಿ ಬೀಜಗಳನ್ನು ಹಾಲಿನೊಂದಿಗೆ ಸೇರಿಸಿ ಕೊಂಡರೆ, ನಿಮ್ಮ ಹೃದಯವನ್ನು ಆರೋಗ್ಯವಾಗಿಡಬಹುದು. ಇದರಲ್ಲಿ ಉತ್ತಮ ಪ್ರಮಾಣದ ಫೈಬರ್, ಆರೋಗ್ಯಕರ ಕೊಬ್ಬುಗಳು ಮತ್ತು ಆಂಟಿ-ಆಕ್ಸಿಡೆಂಟ್‌ಗಳಿವೆ, ಇವು ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿ. ಈ ಬೀಜಗಳಲ್ಲಿರುವ ಮೆಗ್ನೀಸಿಯಮ್ ರಕ್ತದೊತ್ತಡದ ಮಟ್ಟವನ್ನು ನಿಯಂತ್ರಿಸುತ್ತದೆ, ಇದು ಹೃದಯ ಸಂಬಂಧಿತ ಸಮಸ್ಯೆ ಗಳನ್ನು ದೂರವಿಡುತ್ತದೆ.
• ಸೂರ್ಯಕಾಂತಿ ಬೀಜಗಳು
ಸೂರ್ಯಕಾಂತಿ ಬೀಜಗಳು ವಿಟಮಿನ್ ಇ ಮತ್ತು ಆರೋಗ್ಯಕರ ಕೊಬ್ಬಿನ ಉತ್ತಮ ಮೂಲವಾಗಿದೆ. ಅವು ಅಪಧಮನಿಗಳಲ್ಲಿನ ಕೊಬ್ಬಿನ ಶೇಖರಣೆಯನ್ನು ಕಡಿಮೆ ಮಾಡುವ ಮೂಲಕ ಅಡೆತಡೆ ಗಳನ್ನು ತೆರವುಗೊಳಿಸಲು ಸಹಾಯ ಮಾಡುತ್ತವೆ.
Comments are closed.