Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ: ಸೆ.8ರಿಂದ ಸಾಮಾನ್ಯ ಮಳೆ ಇದ್ದು, ಮೋಡ-ಬಿಸಿಲಿನ ವಾತಾವರಣ

Share the Article

Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ, ಅಲ್ಲಲ್ಲಿ ದಿನದಲ್ಲಿ 2,3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಈಗಿನಂತೆ ಸೆಪ್ಟೆಂಬರ್ 7ರ ತನಕ ದಿನದಲ್ಲಿ ಒಂದೆರಡು ಮಳೆ ಇದ್ದು, 8 ರಿಂದ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. 12ರಿಂದ ದಿನದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಇರಬಹುದು.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಜೊತೆಗೆ ಭಾಗಮಂಡಲ, ತಲಕಾವೇರಿ, ಮಡಿಕೇರಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಹಾಸನದ ಒಂದೆರಡು ಕಡೆ, ಚಿಕ್ಕಮಗಳೂರಿನ ಶಿೃಂಗೇರಿ, ಮೂಡಿಗೆರೆ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಸೆಪ್ಟೆಂಬರ್ 9ರಿಂದ ಮೂರು ದಿನಗಳ ಕಾಲ ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿದ್ದು, 12ರಿಂದ ದಿನದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಸೂಚನೆಗಳಿವೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಸೆಪ್ಟೆಂಬರ್ 6 ಹಾಗೂ 7 ರಂದು ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿದ್ದು, ನಂತರ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಒಳನಾಡು : ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಿದ್ದು, ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮೈಸೂರು, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 6 ರಿಂದ 12ರ ತನಕ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಸೆಪ್ಟೆಂಬರ್ 12ರಿಂದ ರಾಜ್ಯದಾದ್ಯಂತ ದಿನದ ಹೆಚ್ಚಿನ ಅವಧಿಯಲ್ಲಿ ಬಿಸಿಲಿನ ವಾತಾವರಣದ ಲಕ್ಷಣಗಳಿವೆ.

ಇದನ್ನೂ ಓದಿ:GST: GST ಪರಿಷ್ಕರಣೆ ಬೆನ್ನಲ್ಲೇ ಐಪಿಎಲ್ ಟಿಕೆಟ್‌ಗಳು ದುಬಾರಿ

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಡಿಸ್ಸಾ ಮೂಲಕ ಪ್ರವೇಶಿಸಿ ಮಧ್ಯಪ್ರದೇಶ, ರಾಜಸ್ತಾನ ಮೂಲಕ ಇವತ್ತು ಗುಜರಾತ್ ಪ್ರವೇಶಿಸಲಿದೆ. ಇವತ್ತು ಮಹಾರಾಷ್ಟ್ರದ ಮುಂಬೈ ಸುತ್ತಮುತ್ತ ಹಾಗೂ ಉತ್ತರ ಗುಜರಾತ್ ನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉತ್ತರ ಗುಜರಾತ್, ರಾಜಸ್ತಾನ ಗಡಿ ಭಾಗಗಳಲ್ಲಿ ಸೆಪ್ಟೆಂಬರ್ 7ರ ತನಕ ಉತ್ತಮ ಮಳೆಯ ಮುನ್ಸೂಚೆನೆ ಇದೆ.

Comments are closed.