Ration Card: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮತ್ತೆ ಆರಂಭ- ಇಲ್ಲಿದೆ ಬೇಕಾಗುವ ದಾಖಲೆಗಳು, ಅರ್ಜಿ ಸಲ್ಲಿಸೋ ವಿವರ

Share the Article

Ration Card: ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿಯನ್ನು ಹಿಡಿದು ಹೊಸ ರೇಷನ್ ಕಾರ್ಡ್ ಗಳಿದೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶವನ್ನು ನೀಡಿದೆ.

ಹೌದು, ರಾಜ್ಯದಲ್ಲಿ ಹೊಸ (ಬಿಪಿಎಲ್‌, ಎಪಿಎಲ್‌, ಇತ್ಯಾದಿ) ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಅರ್ಹರು ಇಂದು (ಸೆಪ್ಟೆಂಬರ್ 6) ಮಧ್ಯಾಹ್ನ 12 ಗಂಟೆಯೊಳಗೆ ಅರ್ಜಿ ಸಲ್ಲಿಕೆ ಮಾಡಬೇಕಿದೆ. ahara.kar.nic.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಫಲಾನುಭವಿಗಳು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಇದನ್ನೂ ಓದಿ:Ration Card: ಸತ್ತವರ ಹೆಸರಿನಲ್ಲೂ ರೇಷನ್ ಕಾರ್ಡ್ – ರಾಜ್ಯದಲ್ಲಿ ಅನರ್ಹ 12.68 ಲಕ್ಷ ಕುಟುಂಬಗಳು ಪತ್ತೆ

ಬೇಕಾಗುವ ದಾಖಲೆಗಳು :

* ವೋಟರ್ ಐಡಿ

* ಆಧಾರ್ ಕಾರ್ಡ್

* ವಯಸ್ಸಿನ ಪ್ರಮಾಣ ಪತ್ರ

* ವಾಹನ ಚಾಲನಾ ಪರವಾನಗಿ

* ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ

* ಮೊಬೈಲ್ ಸಂಖ್ಯೆ

* ಸ್ವಯಂ ಘೋಷಿತ ಪ್ರಮಾಣ ಪತ್ರ

ಅರ್ಜಿ ಸಲ್ಲಿಸುವ ವಿಧಾನ

* kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಿ

* ಅಲ್ಲಿ ಕಾಣಿಸುವ ಇ-ಸೇವೆಗಳು ಎಂಬುದರ ಮೇಲೆ ಕ್ಲಿಕ್ ಮಾಡಿ

* ಅಲ್ಲದೆ, https://ahara.kar.nic.in/Home/EServices ವೆಬ್‌ಸೈಟ್‌ನಲ್ಲೂ ನೇರವಾಗಿ ಕ್ಲಿಕ್ ಮಾಡಬಹುದು.

* ನಂತರ ನೀವು ಇ-ಪಡಿತರ ಚೀಟಿ ಆಯ್ಕೆ ಮಾಡಿ

* ನಂತರ ಕೆಳಗಡೆ ಸ್ಕ್ರಾಲ್ ಮಾಡಿದರೆ, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವ ಲಿಂಕ್ ಸಿಗಲಿದೆ

* ಅಲ್ಲಿ ಕ್ಲಿಕ್ ಮಾಡಿ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಾಡಬೇಕಾಗುತ್ತದೆ

* ಅಲ್ಲಿ ಕೇಳುವಂತಹ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಬೇಕಾಗುತ್ತದೆ

* ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ

* ಬಳಿಕ ಅರ್ಜಿಯ ಜೊತೆಗೆ ಕೇಳುವ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ಲೋಡ್ ಮಾಡಿ. ಆಗ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

Comments are closed.