Home Education Guarantee : ಇನ್ನು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವವರೆಗೆ ಮಾತ್ರ ಗ್ಯಾರಂಟಿ ಯೋಜನೆ ?!

Guarantee : ಇನ್ನು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವವರೆಗೆ ಮಾತ್ರ ಗ್ಯಾರಂಟಿ ಯೋಜನೆ ?!

Hindu neighbor gifts plot of land

Hindu neighbour gifts land to Muslim journalist

Guarantee: ಪ್ರಸ್ತುತ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ತಾನು ಅಧಿಕಾರಕ್ಕೆ ಬರುವ ಮುಂಚೆ ಪಂಚ ಗ್ಯಾರಂಟಿಗಳನ್ನು ಘೋಷಿಸಿ ಅವುಗಳ ಪ್ರಭಾವದ ಮೇಲೆ ಚುನಾವಣೆಯಲ್ಲಿ ಗೆದ್ದಿತ್ತು. ನಂತರ ಮಾತು ಕೊಟ್ಟಂತೆ ಅಧಿಕಾರ ಪಡೆದ ಬಳಿಕ ಅವುಗಳನ್ನು ಜಾರಿ ಕೂಡ ಮಾಡಿತು. ಇದೀಗ ಇವುಗಳಿಂದ ಆರ್ಥಿಕ ಸಂಕಷ್ಟವನ್ನು ಕೂಡ ಎದುರಿಸುತ್ತಿದೆ. ಆದರೆ ಈ ನಡುವೆ ಇನ್ನು ಮುಂದೆ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳನ್ನು ನೀಡಬೇಕೆಂದು ಕಾಂಗ್ರೆಸ್ ಶಾಸಕರು ಒಬ್ಬರು ಆಗ್ರಹಿಸಿದ್ದಾರೆ.

ಹೌದು, ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿದ್ರೆ ಮಾತ್ರವೇ ಐದೂ ಗ್ಯಾರಂಟಿಯನ್ನು ಕುಟುಂಬಕ್ಕೆ ನೀಡಿ ಎಂದು ಕಾಂಗ್ರೆಸ್ ಶಾಸಕ ಕೆ.ಎಸ್.ಬಸವಂತಪ್ಪ ಸಲಹೆ ನೀಡಿದ್ದಾರೆ. ದಾವಣಗೆರೆ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮ ಶಿಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಸಂಖ್ಯೆ ಕಡಿಮೆ ಆಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಹೆಚ್ಚಳ ಆಗಲು ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇನೆ. ಐದು ಗ್ಯಾರಂಟಿ ಪಡೆಯುವ ಫಲಾನುಭವಿಗಳು ತಮ್ಮ ಮಕ್ಕಳ ಸರ್ಕಾರಿ ಶಾಲೆಗೆ ಸೇರಿಸಬೇಕು ಎನ್ನುವ ನಿಯಮ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:Belthangady: ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಅವಮಾನ, 13 ಖಾತೆಗಳ ವಿರುದ್ಧ ಎಫ್‌ಐಆರ್‌

ಅಲ್ಲದೆ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿದರೆ ಮಾತ್ರ ಗ್ಯಾರಂಟಿ ನೀಡುತ್ತೇವೆ ಎಂದರೆ ಒಳ್ಳೆಯದು ಎಂದು ಸಿಎಂಗೆ ಮನವಿ ಮಾಡುತ್ತೇನೆ. ಆಗ ಹಾಜರಾತಿ ಸಂಖ್ಯೆ ಹೆಚ್ಚಳ ಆಗಬಹುದು ಎಂದರು