Weather Report: ನಾಳೆ ಬೆಳಿಗ್ಗೆವರೆಗೆ ಕರ್ನಾಟಕದ ಹವಾಮಾನ ಹೇಗಿದೆ? ಇನ್ನಾದರು ಮಳೆ ಕೊಂಚ ಬಿಡುವು ಕೊಡುತ್ತಾ?

Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಮೋಡ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನ ಜಿಲ್ಲೆಯಲ್ಲಿ ಸ್ವಲ್ಪ ಹೆಚ್ಚು ಮಳೆ ಇರಬಹುದು.
ಈಗಿನಂತೆ ಮುಂದಿನ 2 ದಿವಸಗಳ ಕಾಲ ಹಾಸನ ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉಳಿದ ಮಲೆನಾಡು ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.
ಒಳನಾಡು ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು(ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ.
ಈಗಿನಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಇದನ್ನೂ ಓದಿ:TATA: GST ಕಡಿತ ಬೆನ್ನಲ್ಲೇ ಟಾಟಾ ಕಾರುಗಳ ಬೆಲೆಯಲ್ಲಿ 65,000 ರಿಂದ 1.45ರೂ ಲಕ್ಷವರೆಗೆ ಇಳಿಕೆ !!
ವಾಯುಭಾರ ಕುಸಿತವು ಗುಜರಾತ್, ರಾಜಸ್ತಾನ ಗಡಿ ಭಾಗಗಳಿಗೆ ತಲುಪಿದ್ದು, ಗುಜರಾತ್ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಮುಂಗಾರು ಈಗಾಗಲೇ ದುರ್ಬಲಗೊಂಡಿದ್ದು, ತಮಿಳುನಾಡು ಮೂಲಕ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪರಿಣಾಮದಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯು ಮುಂದುವರಿಯುವ ಸಾಧ್ಯತೆಗಳಿವೆ.
Comments are closed.