Dr. Vishnuvardhan: ಸಾಹಸ ಸಿಂಹ ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಮರಣೋತ್ತರ ʼಕರ್ನಾಟಕ ರತ್ನʼ ಘೋಷಣೆ

Dr. Vishnuvardhan: ಸಾಹಸ ಸಿಂಹ ದಿ.ವಿಷ್ಣುವರ್ಧನ್ ಹಾಗೂ ಅಭಿನಯ ಸರಸ್ವತಿ ದಿ.ನಟಿ ಬಿ.ಸರೋಜಾ ದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ ಘೋಷಣೆ ಮಾಡಿದ್ದಾರೆ.

ನಟ ವಿಷ್ಣುವರ್ಧನ್ ಅವರಿಗೆ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಸಂದರ್ಭದಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:RBI ವಿವಿಧ ಶಾಖೆಗಳಲ್ಲಿನ ಹುದ್ದೆಗೆ ನೇಮಕಾತಿ- ಇಲ್ಲಿದೆ ಅರ್ಹತೆ, ಹುದ್ದೆ ಹಾಗೂ ಸಂಬಳದ ವಿವರ
Comments are closed.