Multiplex theatre: ಇನ್ಮುಂದೆ ಮಲ್ಟಿಪ್ಲೆಕ್ಸ್ ಸೇರಿ ಎಲ್ಲ ಚಿತ್ರಮಂದಿರಗಳಲ್ಲಿ ಪ್ರತಿ ಟಿಕೆಟ್‍ಗೆ ಒಂದೇ ಬೆಲೆ!

Share the Article

Multiplex theatre: ಮಲ್ಟಿಪ್ಲೆಕ್ಸ್‌ ಥಿಯೇಟರ್‌ಗಳಲ್ಲಿ (multiplex theatre) ನಡೆಯುತ್ತಿದ್ದ ಮೋಸಕ್ಕೆ ರಾಜ್ಯ ಸರ್ಕಾರ ಕಡಿವಾಣ ಹಾಕಿದ್ದು, ಸಿನಿಮಾ ಪ್ರಿಯರಿಗೆ ಗುಡ್‌ನ್ಯೂಸ್‌ ಕೊಟ್ಟಿದೆ. ಹೌದು, ಇನ್ಮುಂದೆ ಮಲ್ಟಿಪ್ಲೆಕ್ಸ್ ಸೇರಿದಂತೆ ಕರ್ನಾಟಕ ದಲ್ಲಿ ಎಲ್ಲ ಚಿತ್ರಮಂದಿರಗಳಲ್ಲಿ ಏಕರೂಪ ದರ ನಿಗದಿ ಮಾಡಿ ರಾಜ್ಯ ಸರ್ಕಾರ (Karnataka Government) ಅಧಿಸೂಚನೆ ಹೊರಡಿಸಿದೆ.

ಟಿಕೆಟ್‌ ದರ ಎಷ್ಟು?

ಇನ್ಮುಂದೆ ರಾಜ್ಯದ ಮಲ್ಟಿಪ್ಲೆಕ್ಸ್‌ ಸೇರಿದಂತೆ ಎಲ್ಲಾ ಚಿತ್ರಮಂದಿಗಳಲ್ಲಿ, ಎಲ್ಲಾ ಭಾಷಯ ಚಿತ್ರಗಳಿಗೆ ಹಾಗೂ ಎಲ್ಲಾ ಪ್ರದರ್ಶನಕ್ಕೆ ಎಲ್ಲಾ ರೀತಿಯ ತೆರಿಗೆ ಹೊರತುಪಡಿಸಿ ಟಿಕೆಟ್‌ ದರ (Cinema Ticket Price) 200 ರೂ. ಮೀರದಂತೆ ಆದೇಶದಲ್ಲಿ ತಿಳಿಸಿದೆ.

ದರ ಕಡಿಮೆಯಾಗಿದ್ದು ಯಾಕೆ?

ಕರ್ನಾಟಕದಲ್ಲಿ ಮಲ್ಟಿಪ್ಲೆಕ್ಸ್ ಥಿಯೇಟರ್ ಮಾಲೀಕರು ಸಿನಿಮಾಗೆ ಹೆಚ್ಚು ದರದ ಟಿಕೆಟ್ ನಿಗದಿ ಮಾಡುವ ಕಾರಣ ಜನ ಥಿಯೇಟರ್ ಗಳಿಗೆ ಬರುತ್ತಿಲ್ಲ. ಹೀಗಾಗಿ ಟಿಕೆಟ್ ದರವನ್ನು ಕಡಿಮೆ ಮಾಡಿ ಏಕರೂಪದ ದರವನ್ನು ತರಬೇಕು ಎಂದು ಆಗ್ರಹಿಸಿ ಜನ ಮತ್ತು ಸಿನಿಮಾ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಕಳೆದ ವರ್ಷ ಆಂದೋಲನ ನಡೆಸಿದ್ದರು. ಇದರ ಜೊತೆಗೆ ಈ ಸಮಸ್ಯೆ ಬಗೆಹರಿಸಲು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು ನೇತೃತ್ವದಲ್ಲಿ ಗಿರೀಶ್ ಕಾಸರವಳ್ಳಿ, ಭಾರತಿ ವಿಷ್ಣುವರ್ಧನ್, ರಾಘವೇಂದ್ರ ರಾಜ್‍ಕುಮಾರ್, ರಾಕ್‍ಲೈನ್ ವೆಂಕಟೇಶ್, ಭಾಷಾ, ಜಯಮಾಲ, ಥಾಮಸ್ ಡಿಸೋಜಾ, ಕೆ ವಿ ಚಂದ್ರಶೇಖರ್ ಮತ್ತು ಗಂಗಾಧರ್ ಮೊದಲಿಯಾರ್ ಅವರುಗಳನ್ನು ಒಳಗೊಂಡ 17 ಜನರ ಸದಸ್ಯರ ಸಮಿತಿಯೊಂದನ್ನು ರಚಿಸಿತ್ತು.

ಇದನ್ನೂ ಓದಿ:Karnataka Grameena Bank Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 1425 ಹುದ್ದೆಗಳಿಗೆ ಭರ್ಜರಿ ನೇಮಕಾತಿ

ಈ ಸಮಿತಿ ಟಿಕೆಟ್ ದರಕ್ಕೆ ಗರಿಷ್ಠ ಮಿತಿಯನ್ನು ನಿಗದಿಪಡಿಸಬೇಕು ಹಾಗೂ ಪ್ರೈಮ್ ಟೈಂನಲ್ಲಿ ಪ್ರತಿ ಮಲ್ಟಿಪ್ಲೆಕ್ಸ್ ನಲ್ಲಿ ಎರಡು ಕನ್ನಡ ಸಿನೆಮಾಗಳನ್ನು ಕಡ್ಡಾಯವಾಗಿ ತೋರಿಸಲು ನಿಯಮ ಮಾಡುವಂತೆ ಸರ್ಕಾರಕ್ಕೆ ವರದಿ ನೀಡಿತ್ತು. ಈ ಹಿನ್ನೆಲೆ ಏಕರೂಪ ದರ ನಿಗದಿ ಮಾಡಿ ಇಂದು ರಾಜ್ಯ ಸರ್ಕಾರ ಆದೇಶ ಹೊಡಿಸಿದೆ.

Comments are closed.