

BCCI: ಬ್ಯಾಟಿಂಗ್ ದಂತಕಥೆ ಮತ್ತು ಭಾರತದ ಮಾಜಿ ನಾಯಕ ಸಚಿನ್ ತೆಂಡೂಲ್ಕರ್ ಬಿಸಿಸಿಐನ ಮುಂದಿನ ಅಧ್ಯಕ್ಷರಾಗುತ್ತಾರೆ ಎಂಬ ಸುದ್ದಿ ಸಾಕಷ್ಟು ಸುದ್ದಿಯಾಗುತ್ತಿದೆ.
ವಾಸ್ತವವಾಗಿ 2022 ರಿಂದ ಬಿಸಿಸಿಐ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತದ್ದ ರೋಜರ್ ಬಿನ್ನಿ ತಮಗೆ 70 ವರ್ಷ ತುಂಬಿದ ಕಾರಣ ಈ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಕಾರ್ಯದರ್ಶಿ ದೇವಜಿತ್ ಸೈಕಿಯಾ ಹಂಗಾಮಿ ಅಧ್ಯಕ್ಷರಾಗಿ ಮಂಡಳಿಯನ್ನು ಮುನ್ನಡೆಸುತ್ತಿದ್ದಾರೆ. ಪ್ರಸ್ತುತ ಖಾಲಿಯಾಗಿರುವ ಬಿಸಿಸಿಐ ಅಧ್ಯಕ್ಷರ ಹುದ್ದೆಗೆ ಹಲವು ದಿಗ್ಗಜರ ಹೆಸರು ಕೇಳಿಬರುತ್ತಿದೆ. ಇದೆಲ್ಲವುಗಳ ನಡುವೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಈ ಹುದ್ದೆಯನ್ನು ವಹಿಸಿಕೊಳ್ಳಬಹುದು ಎಂದು ಕೆಲವು ವರದಿಗಳು ಹೇಳಿವೆ.
ಇನ್ನು ಈ ಕುರಿತಾಗಿ ಸಂಸ್ಥೆಯು ಸ್ಪಷ್ಟೀಕರಣ ನೀಡಿದ್ದು ‘ಸಚಿನ್ ತೆಂಡೂಲ್ಕರ್ ಅವರನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಲಾಗುತ್ತಿದೆ ಅಥವಾ ನಾಮನಿರ್ದೇಶನ ಮಾಡಲಾಗಿದೆ ಎಂಬ ಬಗ್ಗೆ ಕೆಲವು ವರದಿಗಳು ಮತ್ತು ವದಂತಿಗಳು ಹರಡುತ್ತಿವೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಅಂತಹ ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ನಾವು ಸ್ಪಷ್ಟವಾಗಿ ಹೇಳಲು ಬಯಸುತ್ತೇವೆ. ಆಧಾರರಹಿತ ಊಹಾಪೋಹಗಳಿಗೆ ನಂಬಿಕೆ ಇಡದಂತೆ ಸಂಬಂಧಪಟ್ಟ ಎಲ್ಲರನ್ನೂ ನಾವು ಒತ್ತಾಯಿಸುತ್ತೇವೆ’ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:Udupi: ಮದುವೆಗೆ ನಿರಾಕರಣೆ: ಯುವತಿಗೆ ಚಾಕುವಿನಿಂದ ಇರಿದ ಯುವಕ
ಅಲ್ಲದೆ ಸಚಿನ್ ತೆಂಡೂಲ್ಕರ್ ಅವರು ಕೂಡ ಈ ಬಗ್ಗೆ ಮಾತನಾಡಿದ್ದು ‘ಬಿಸಿಸಿಐ ಅಧ್ಯಕ್ಷ ಹುದ್ದೆಗೆ ನನ್ನ ಹೆಸರನ್ನು ಪರಿಗಣಿಸಲಾಗುತ್ತಿದೆ ಅಥವಾ ನಾಮನಿರ್ದೇಶನ ಮಾಡಲಾಗಿದೆ ಎಂಬ ಬಗ್ಗೆ ಕೆಲವು ಸುದ್ದಿಗಳು ಮತ್ತು ವದಂತಿಗಳು ಹರಡುತ್ತಿವೆ ಎಂದು ನಮಗೆ ತಿಳಿದುಬಂದಿದೆ. ಆದರೆ ಈ ರೀತಿಯ ಏನೂ ಸಂಭವಿಸಿಲ್ಲ ಎಂದು ನಾವು ಸ್ಪಷ್ಟವಾಗಿ ಹೇಳಲು ಬಯಸುತ್ತೇವೆ. ಆಧಾರರಹಿತ ಊಹಾಪೋಹಗಳಿಗೆ ಗಮನ ಕೊಡಬೇಡಿ ಎಂದು ನಾನು ಎಲ್ಲರಲ್ಲೂ ವಿನಂತಿಸುವೆ ಎಂದಿದ್ದಾರೆ.













