PM Modi : ಹಾಸನದಲ್ಲಿ ಗಣಪತಿ ಮೆರವಣಿಗೆ ದುರಂತ- ಮೃತರ ಕುಟುಂಬಕ್ಕೆ 2 ಲಕ್ಷ ಘೋಷಿಸಿದ ಪ್ರಧಾನಿ ಮೋದಿ

Share the Article

PM Modi : ಹಾಸನದಲ್ಲಿ (hassan tragedy ) ಶುಕ್ರವಾರ ರಾತ್ರಿ ಗಣೇಶ ಮೆರವಣಿಗೆ (Ganesha procession) ವೇಳೆ ಸಂಭವಿಸಿದ ದುರಂತದಲ್ಲಿ ಸಾವಿಗೀಡಾದವರಿಗೆ ಪ್ರಧಾನಿ ನರೇಂದ್ರ ಮೋದಿಯವರು 2 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಣೇಶ ಮೆರವಣಿಗೆಯ ವೇಳೆ ಕ್ಯಾಂಟರ್ ಹರಿದು ಸುಮಾರು 9 ಜನ ಸಾವನ್ನಪ್ಪಿದ್ದರೆ, 20 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಇದೀಗ ಸಾವಿನ ಸಂಖ್ಯೆ ಇನ್ನೂ ಇರುತ್ತಲೇ ಇದೆ. ಸಾವಿಗೀಡಾದವರಿಗೆ ಈಗಾಗಲೇ ರಾಜ್ಯ ಸರ್ಕಾರ 5 ಲಕ್ಷ ಪರಿಹಾರವನ್ನು ಘೋಷಿಸಿದೆ. ಇದರ ನಡುವೆ ಹಾಸನ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ (Pm modi) ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ 50,000 ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ:Actress Disha Patani: ನಟಿ ದಿಶಾ ಪಟಾನಿ ಮನೆ ಹೊರಗಡೆ ಗುಂಡಿನ ದಾಳಿ

ಈ ಬಗ್ಗೆ ಪ್ರಧಾನಿ ಮೋದಿಯವರು ಪ್ರತಿಕ್ರಿಯಿಸಿದ್ದು, ಇದೊಂದು ಹೃದಯವಿದ್ರಾವಕ ಘಟನೆ ಮೃತರ ಆತ್ಮಕ್ಕೆ ಶಾಂತಿ ಕೋರಿ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಮೃತ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.

Comments are closed.