Hassana: ಹಾಸನ: ಗಣೇಶ ಮೆರವಣಿಗೆ ವೇಳೆ ಟ್ರಕ್ ದುರಂತ: ಕಾರಣ ಬಯಲು

Hassana: ಗಣೇಶ ಮೆವಣಿಗೆ ಸಂದರ್ಭದಲ್ಲಿ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 373 ರಲ್ಲಿ ನಿನ್ನೆ (ಶುಕ್ರವಾರ) ನಡೆದಿದ್ದು, ಈ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9 ಕ್ಕೆ ಏರಿಕೆ ಆಗಿದೆ. ಈ ದುರಂತಕ್ಕೆ ಕ್ಯಾಂಟರ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಹೇಳಿದ್ದಾರೆ.

ಮೃತರು ಬಹುತೇಕ ಮಂದಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದಾರೆ.
ಬಳ್ಳಾರಿ ನಿವಾಸಿ ಅಂತಿಮ ಬಿಇ ವಿದ್ಯಾರ್ಥಿ ಪ್ರವೀಣ್, ಹೊಳೆನರಸೀಪುರ ತಾಲೂಕಿನ ಹಳೆಕೋಟೆ ಹೋಬಳಿ ಕೆ.ಬಿ.ಪಾಳ್ಯ ನಿವಾಸಿ ರಾಜೇಶ್(17), ಡನಾಯಕನಹಳ್ಳಿ ಕೊಪ್ಪಲು ನಿವಾಸಿ ಈಶ್ವರ(17), ಮುತ್ತಿಗೆಹೀರಳ್ಳಿ ಗ್ರಾಮದ ನಿವಾಸಿ ಗೋಕುಲ್(17), ಕಬ್ಬಿನಹಳ್ಳಿ ನಿವಾಸಿಗಳಾದ ಕುಮಾರ(25), ಪ್ರವೀಣ(25), ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಗವಿ ಗಂಗಾಪುರ ಗ್ರಾಮ ನಿವಾಸಿ ಮಿಥುನ್(23), ಚಿಕ್ಕಮಗಳೂರು ಜಿಲ್ಲೆಯ ಮಾಣೇನಹಳ್ಳಿ ನಿವಾಸಿ ಬಿಇ ವಿದ್ಯಾರ್ಥಿ ಸುರೇಶ್(19), ಹಾಸನ ತಾಲೂಕಿನ ಬಂಟರಹಳ್ಳಿ ಗ್ರಾಮದ ನಿವಾಸಿ ಪ್ರಭಾಕರ್(55) ಮೃತರು.
ಇದನ್ನೂ ಓದಿ:ಹಾಸನ ಗಣೇಶ ಮೆರವಣಿಗೆ ವೇಳೆ ದುರಂತ: ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ ಸಿಎಂ
ಈ ಘಟನೆಗೆ ಕ್ಯಾಂಟರ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದ್ದು, ಬೈಕ್ ಬ್ಯಾರಿಕೇಡ್‌ಗೆ ಗುದ್ದಿ ಕ್ಯಾಂಟರ್ ನುಗ್ಗಿದ್ದು, ಚಾಲಕನಿಗೂ ಗಾಯವಾಗಿದ್ದು, ಆತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
Comments are closed.