India vs Pakistan: ಇಂದು ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯ: ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ?

India vs Pakistan: ಇಂದು 2025 ರ ಏಷ್ಯಾಕಪ್ನ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ, ಪಾಕಿಸ್ತಾನ ಎದುರಾಗಲಿದೆ. ಒಂದು ವರ್ಷಕ್ಕೂ ಹೆಚ್ಚು ಸಮಯದ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಟಿ20 ಪಂದ್ಯ ನಡೆಯುತ್ತಿದೆ.

2025 ರ ಏಷ್ಯಾಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಸೆಪ್ಟೆಂಬರ್ 14 ರ ಭಾನುವಾರದಂದು ನಡೆಯಲಿದೆ. ಭಾರತ ಪಾಕಿಸ್ತಾನ ನಡುವಿನ ಪಂದ್ಯ ಇಂದು ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯದ ಟಾಸ್ ಅರ್ಧ ಗಂಟೆ ಮೊದಲು ಅಂದರೆ ಸಂಜೆ 7.30 ಕ್ಕೆ ನಡೆಯಲಿದೆ.
ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಭಾರತ-ಪಾಕಿಸ್ತನ ಪಂದ್ಯ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್ವರ್ಕ್ನ ಚಾನೆಲ್ 1,2,3 ಮತ್ತು 5 ರಲ್ಲಿ ವೀಕ್ಷಿಸಬಹುದು. ಆನ್ಲೈನ್ ಸ್ಟ್ರೀಮಿಂಗ್ ಅನ್ನು ನೀವು ಸೋನಿ ಲಿವ್ ಅಪ್ಲಿಕೇಶನ್ ಅಥವಾ ವೆಬ್ಸೈಟ್ನಲ್ಲಿ ವೀಕ್ಷಿಸಬಹುದು.
ಭಾರತದ ಸಂಭಾವ್ಯ ಪ್ಲೇಯಿಂಗ್ 11: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
ಪಾಕಿಸ್ತಾನ ಸಂಭಾವ್ಯ ಪ್ಲೇಯಿಂಗ್ 11: ಸೈಮ್ ಅಯೂಬ್, ಸಾಹಿಬ್ಜಾದಾ ಫರ್ಹಾನ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಫಖರ್ ಜಮಾನ್, ಸಲ್ಮಾನ್ ಆಘಾ (ನಾಯಕ), ಹಸನ್ ನವಾಜ್, ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ಸುಫಿಯಾನ್ ಮುಕೀಮ್, ಅಬ್ರಾರ್ ಅಹ್ಮದ್.
Comments are closed.