HAL: ‘HAL’ ನಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ

HAL: ಹಿಂದುಸ್ಥಾನ್ ಏರೋನ್ಯಾಟಿಕ್ಸ್ (ಲಿ) (HAL) ಟೆಕ್ನಿಕಲ್ ಟ್ರೈನಿಂಗ್ ಇಸ್ಟಿಟ್ಯೂಟ್ ಬೆಂಗಳೂರು-17 ರವರಿಂದ ಫಿಟ್ಟರ್, ಟರ್ನರ್, ಮೆಷಿನಿಷ್ಟ್, ಎಲೆಕ್ಟ್ರಿಶಿಯನ್, ವೆಲ್ಡರ್, ಫೌಂಡ್ರೀ ಮ್ಯಾನ್, ಶೀಟ್ ಮೆಟಲ್ ವರ್ಕರ್, ಟ್ರೇಡ್ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಕಾರ್ ಪೇಂಟರ್, ಟೂಲ್ ಅಂಡ್ ಡೈ ಮೇಕರ್, ಸಿಎನ್ ಸಿ ಪ್ರೋಗ್ರಾಮರ್ ಹಾಗೂ ಆಪರೇಟರ್, ಮೆಕಾನಿಕ್ ರೆಫ್ರೀಜರೇಷನ್ ಮತ್ತು ಏರ್ ಕಂಡೀಷನಿಂಗ್ ಗಳಿಗೆ ಫುಲ್ ಟರ್ಮ್ ಅಪ್ರೆಂಟಿಸ್ ಟ್ರೈನಿಂಗ್ ತರಬೇತಿ ನೀಡುವವರಿದ್ದು, ಅಸಕ್ತ ಅರ್ಹ ಅಭ್ಯರ್ಥಿಗಳು ಉದ್ಯೋಗಾಧಿಕಾರಿಗಳು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ. ಹಾಸನ ಇವರನ್ನು ರವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ: ಐಟಿಐ ತೇರ್ಗಡೆ ಹೊಂದಿರಬೇಕು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ https://apprenticeshipindia.gov.in/candidate-registration ನಲ್ಲಿ ನೋಂದಾಯಿಸಿ ಅರ್ಜಿ ನಮೂನೆಯಲ್ಲಿ ಅಪ್ರೇಂಟಿಸ್ ನೋಂದಣಿ ಸಂಖ್ಯೆ ನಮೂದಿಸುವುದು ಹಾಗೂ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಸ್ಟೈಫಂಡ್( ಸರ್ಕಾರ ನಿಗಧಿಪಡಿಸಿದಂತೆ) ನೀಡಲಾಗುವುದು.
ಭರ್ತಿ ಮಾಡಿದ ಅರ್ಜಿಯನ್ನು ಈ ಕಚೇರಿಗೆ ಸಲ್ಲಿಸಲು ಕೊನೆಯ ದಿನಾಂಕ: 30-09-2025 ಅರ್ಜಿಯೊಂದಿಗೆ ಅಭ್ಯರ್ಥಿಯು ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವ ಚಿತ್ರ ಅಂಟಿಸಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐ.ಟಿ.ಐ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಎನ್.ಟಿ.ಸಿ ಸರ್ಟಿಫೀಕೆಟ್, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಸಲ್ಲಿಸಬೇಕು.
ಇದನ್ನೂ ಓದಿ:Health: ಕನ್ನಡಕ ಮತ್ತು ಶಸ್ತ್ರಚಿಕಿತ್ಸೆ ಇಲ್ಲದೇ 2 ವರ್ಷಗಳಲ್ಲೇ ದೃಷ್ಟಿ ಮರಳಿಸುವ ‘ಐ ಡ್ರಾಪ್ಸ್’
ಉದ್ಯೋಗಾಧಿಕಾರಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ರವರನ್ನು ಕಚೇರಿ ವೇಳೆಯಲ್ಲಿ ಅಥವಾ ದೂರವಾಣಿ ಸಂಖ್ಯೆ: 08172-296374 ರಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದೆ.
Comments are closed.