Weather Report: ಮತ್ತೆ ವಾಯುಭಾರ ಕುಸಿತದ ಭೀತಿ: ಎಲ್ಲೆಲ್ಲಿ ಮಳೆ ಸಾಧ್ಯತೆ?

Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಸಣ್ಣ ಪ್ರಮಾಣದ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಈ ವಾತಾವರಣವು ಸೆಪ್ಟೆಂಬರ್ 23ರ ತನಕ ಮುಂದುವರಿಯುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಿಲ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 23ರ ತನಕವೂ ಈ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ
ಒಳನಾಡು : ಉತ್ತರ ಒಳನಾಡಿನ ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಬಾಗಲಕೋಟೆ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮೈಸೂರಿನ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 17ರ ತನಕ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಗಳಿವೆ.
ಇದನ್ನೂ ಓದಿ:Supreme Court order on Waqf: ವಕ್ಫ್ (ತಿದ್ದುಪಡಿ) ಕಾಯ್ದೆಗೆ ತಡೆ ನೀಡಲು ನಕಾರ: ಸುಪ್ರೀಂ
ವಾಯುಭಾರ ಕುಸಿತದ ಪರಿಣಾಮದಿಂದ ಮಹಾರಾಷ್ಟ್ರ ಸೇರಿದಂತೆ 19 ರಾಜ್ಯಗಳಿಗೆ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ, ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಭಾರತ ಹವಾಮಾನ ಇಲಾಖೆ (IMD) ಸೆಪ್ಟೆಂಬರ್ 16 ರಂದು (ಮಂಗಳವಾರ) 19 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಭಾರಿ ಮಳೆಯಾಗುವ ಎಚ್ಚರಿಕೆ ನೀಡಿದೆ. ಅರುಣಾಚಲ ಪ್ರದೇಶ, ಬಿಹಾರ, ಅಸ್ಸಾಂ, ಮೇಘಾಲಯ, ಉತ್ತರ ಪ್ರದೇಶ, ಜಾರ್ಖಂಡ್, ಗೋವಾ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಕರ್ನಾಟಕ, ತಮಿಳುನಾಡು, ಪುದುಚೇರಿ, ಉತ್ತರಾಖಂಡ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಮಧ್ಯಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.
Comments are closed.