Banu Mushtaq: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆ ವಿರೋಧ: ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌

Share the Article

Banu Mushtaq: ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ನಾಯಕ ಪ್ರತಾಪ್‌ ಸಿಂಹ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ.

ಇಂದು ಅರ್ಜಿಯ ವಿಚಾರಣೆ ನಡೆಸಿದ ಸಿಜೆ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ಪೀಠ ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡು ಬಂದಿಲ್ಲ ಎಂದು ಹೇಳಿ ಅರ್ಜಿಯನ್ನು ತಿರಸ್ಕರಿಸಲಾಗಿದೆ.

ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್‌ ಆಯ್ಕೆ ವಿರೋಧ ಮಾಡಿ ಪ್ರತಾಪ್‌ ಸಿಂಹ ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಿದ್ದು, ಪೀಠ ಪ್ರತಾಪ್‌ ಸಿಂಹ ಅರ್ಜಿ ವಜಾ ಮಾಡಿದೆ. ದಸರಾ ಉದ್ಘಾಟಕರ ಆಯ್ಕೆಯಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ ಎಂದು ಹೈಕೋರ್ಟ್‌ ಹೇಲಿದೆ. ಪ್ರತಾಪ್‌ ಸಿಂಹ ಮಾತ್ರವಲ್ಲದೇ ಟಿ.ಗಿರೀಶ್‌ ಕುಮಾರ್‌, ಹೆಚ್.ಎಸ್‌.ಗೌರವ್‌ ಎಂಬುವವರೂ ಸಾರ್ವಜನಿಕ ಹಿತಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅವುಗಳನ್ನೂ ಕೋರ್ಟ್‌ ವಜಾ ಮಾಡಿದೆ.

ದಸರಾ ಉದ್ಘಾಟನೆ ಸಮಯದಲ್ಲಿ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು, ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆ ಮಾಡಬೇಕೆನ್ನುವ ಸಂಪ್ರದಾಯವಿದೆ. ಬಾನು ಮುಷ್ತಾಕ್‌ ಹಿಂದೂ ವಿರೋಧಿ, ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ರಾಜ್ಯಸರಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿದ್ದು, ಸರಕಾರದ ಕ್ರಮಕ್ಕೆ ತಡೆ ನೀಡಬೇಕು ಎಂದು ಪ್ರತಾಪ್‌ ಸಿಂಹ ಮನವಿ ಮಾಡಿದ್ದರು.

Comments are closed.