Darshan: ಕೋರ್ಟ್ ಆದೇಶಿಸಿದ್ರೂ ಹಾಸಿಗೆ, ದಿಂಬು ನೀಡಲು ಜೈಲಧಿಕಾರಿಗಳಿಂದ ನಕಾರ

Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಆದೇಶದ ನಂತರ ಮತ್ತೆ ಜೈಲುಪಾಲಾಗಿರುವ ನಟ ದರ್ಶನ್ ಗೆ ನರಕ ಯಾತನೆ ಆಗಿದೆ.

ಇತ್ತೀಚಿಗಷ್ಟೇ ಕೋರ್ಟ್ ಹಾಸಿಗೆ, ದಿಂಬು ನೀಡುವಂತೆ ಆದೇಶಿಸಿದ್ದರೂ ಕೂಡ ಜೈಲಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ದರ್ಶನ್ ಪರ ವಕೀಲರು 57ನೇ ಸಿಸಿಎಚ್ ಕೋರ್ಟ್‌ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ.
ಇದನ್ನೂ ಓದಿ:EPFO: ನಿಮ್ಮ ‘PF ಬ್ಯಾಲೆನ್ಸ್ ಚೆಕ್’ ಮಾಡಲು ಸುಲಭ ವಿಧಾನ ಇಲ್ಲಿದೆ
ದರ್ಶನ್ ಪರ ವಕೀಲ ಸುನೀಲ್ ಅವರು, ತುಂಬಾ ಚಳಿಯಿದೆ, ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ಕಷ್ಟವಾಗುತ್ತಿದೆ. ಹೀಗಾಗಿ ದಿಂಬು, ಹಾಸಿಗೆ ಕೊಡಿಸಬೇಕು ಎಂದು ಮನವಿ ಮಾಡಿ, ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅಂತೆಯೇ, ನ್ಯಾಯಾಲಯ ದಿಂಬು, ಹಾಸಿಗೆ ಹಾಗೂ ಕನಿಷ್ಠ ಸೌಲಭ್ಯಗಳನ್ನಾದರೂ ನೀಡಬೇಕು ಎಂದು ಆದೇಶಿಸಿತ್ತು. ಆದರೆ ಇದೀಗ ದರ್ಶನ್ (Darshan) ಪರ ವಕೀಲರು, ಕೋರ್ಟ್ (Court)ಆದೇಶ ಮಾಡಿದ್ರೂ ಜೈಲಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು. ದರ್ಶನ್ ಪರ ವಕೀಲರು ಮತ್ತೇ ಕೋರ್ಟ್ ಮೊರೆ ಹೋಗಿದ್ದಾರೆ.
Comments are closed.