Movie Ticket Price: 200 ರೂ. ಸಿನಿಮಾ ಟಿಕೆಟ್ ದರ ನಿಗದಿ: ಕೋರ್ಟ್ ಮೊರೆಹೋದ ಮಲ್ಟಿಪ್ಲೆಕ್ಸ್ ಒಕ್ಕೂಟ

Movie Ticket Price: ಕರ್ನಾಟಕದಲ್ಲಿ 200 ರೂಪಾಯಿ ಸಿನಿಮಾ ಟಿಕೆಟ್ ದರ (Movie Ticket Price) ನಿಗದಿ ಮಾಡಲಾಗಿದೆ. ಇದರಿಂದಾಗಿ ಪ್ರೇಕ್ಷಕರಿಗೆ ಅನುಕೂಲ ಆಗಲಿದೆ. ಆದರೆ ಮಲ್ಟಿಪ್ಲೆಕ್ಸ್ ಒಕ್ಕೂಟವು ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.

ಹೌದು, ಕರ್ನಾಟಕದಲ್ಲಿ 200 ರೂಪಾಯಿ ಸಿನಿಮಾ (cinema)ಟಿಕೆಟ್ ದರ ನಿಗದಿ ಮಾಡಿರುವುದನ್ನು ಪ್ರಶ್ನೆ ಮಾಡಿ ಮಲ್ಟಿಪ್ಲೆಕ್ಸ್ ಒಕ್ಕೂಟವು (Multiplex Association) ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ.
ಸೆಪ್ಟೆಂಬರ್ 16ರಂದು ಈ ಅರ್ಜಿಯ ವಿಚಾರಣೆ ನಡೆಯಲಿದೆ. ‘ಅಕ್ಟೋಬರ್ 1ರಂದು ‘ಕಾಂತಾರ: ಚಾಪ್ಟರ್ 1’ ಬಿಡುಗಡೆ ಆಗಲಿದೆ. ಡಿಸೆಂಬರ್ ತಿಂಗಳಲ್ಲಿ ದರ್ಶನ್ ನಟನೆಯ ‘ಡೆವಿಲ್’, ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ರಿಲೀಸ್ ಆಗಲಿದೆ. ಆದ್ರೆ ಸಿನಿಮಾ ಟಿಕೆಟ್ ದರ ಕಡಿಮೆ ಮಾಡಿರುವುದರಿಂದ ಕಲೆಕ್ಷನ್ ಕಡಿಮೆ ಆಗುವ ಸಾಧ್ಯತೆ ಇದೆ. ಮುಂಬರುವ ಹಲವು ಬಿಗ್ ಬಜೆಟ್ ಸಿನಿಮಾಗಳಿಗೂ ಇದರ ಬಿಸಿ ತಟ್ಟಬಹುದು. ಈ ಹಿನ್ನೆಲೆಯಲ್ಲಿ ಕೋರ್ಟ್ ಮೊರೆ ಹೋಗಲಾಗಿದೆ.
ಇದನ್ನೂ ಓದಿ:HAL: ‘HAL’ ನಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
ಆಂಧ್ರದಲ್ಲಿ ಕೂಡ ಟಿಕೆಟ್ ಬೆಲೆ ಏರಿಕೆಗೆ ಕಡಿವಾಣ ಇದೆ. ಆದರೆ ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆ ಆದಾಗ ನಿರ್ಮಾಪಕರು ಸರ್ಕಾರದ ಬಳಿ ಅರ್ಜಿ ಹಾಕಿಕೊಂಡು ಬಿಡುಗಡೆ ಆದ ಮೊದಲ ವಾರ ಅಥವಾ 3 ದಿನ ಅಥವಾ 10 ದಿನಗಳ ಅವಧಿಯವರೆಗೆ ಟಿಕೆಟ್ ಬೆಲೆಯನ್ನು ಹೆಚ್ಚು ಮಾಡಲು ಅನುಮತಿ ಪಡೆಯುವ ಅವಕಾಶ ನೀಡಲಾಗಿದೆ. ಕರ್ನಾಟಕದಲ್ಲಿ ಕೂಡ ಈ ರೀತಿ ಮಾಡುವ ಸಾಧ್ಯತೆ ಇದೆ.
Comments are closed.