Drugs supply: ಗಾಂಜಾ ಮಾರಾಟ ಮತ್ತು ಸಾಗಾಟ: ಮಹಿಳೆ ಸೇರಿ ಇಬ್ಬರು ಆರೋಪಿಗಳು ಅಂದರ್

Drugs supply: ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಗ ಬಾಣಂಗಾಲದಲ್ಲಿ ಅಕ್ರಮವಾಗಿ ನಿಷೇಧಿತ ಗಾಂಜಾ ಮಾರಾಟ-ಸಾಗಾಟ ಮಾಡುತ್ತಿದ್ದ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯ ಮೂಲದ ಪ್ರಸ್ತುತ ಸಿದ್ದಾಪುರ ಮಾರ್ಗೋಲ್ಲಿ ಟಾಟಾ ಎಸ್ಟೇಟ್ ನ ಲೈನ್ ಮನೆಯ ನಿವಾಸಿಗಳಾದ ಅರ್ಚನಾ ಸರ್ದಾರ್ (30) ಮತ್ತು ತಪಾನ್ ಸರ್ದಾರ್ (30) ಎಂಬಿಬ್ಬರು ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ 1 ಕೆ.ಜಿ. 166 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಸೆ. 14ರಂದು ಮಾರ್ಗೋಲ್ಲಿ ಟಾಟಾ ಎಸ್ಟೇಟ್ ಜಂಕ್ಷನ್ ಬಸ್ ನಿಲ್ದಾಣದ ಬಳಿ ಗಾಂಜಾ ಸರಬರಾಜು- ಮಾರಾಟ ಮಾಡುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿ ಮಾಲು ಸಮೇತ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಇದನ್ನೂ ಓದಿ:NUDE PARTY: ‘ನಗ್ನ ಪಾರ್ಟಿ’ಗೆ ಜೋಡಿಗಳಿಗೆ ಆಹ್ವಾನ : ಪೋಸ್ಟರ್ ವೈರಲ್ : ತನಿಖೆ ಆರಂಭ
ಮಡಿಕೇರಿ ಪೊಲೀಸ್ ಉಪ ವಿಭಾಗದ ಡಿ.ಎಸ್.ಪಿ. ಸೂರಜ್ ಪಿ.ಎ., ಮಡಿಕೇರಿ ನಗರ ಪೋಲಿಸ್ ವೃತ್ತ ನಿರೀಕ್ಷಕರಾದ ಪಿ.ಕೆ. ರಾಜು, ಸಿದ್ದಾಪುರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್ ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಈ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ಪೊಲೀಸ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮರಾಜನ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಬಿ.ಪಿ. ದಿನೇಶ್ ಕುಮಾರ್ ಶ್ಲಾಘಿಸಿದ್ದಾರೆ.
Comments are closed.