Income Tax Returns: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಒಂದು ದಿನ ಗಡುವು ವಿಸ್ತರಣೆ

Share the Article

Income tax returns filing deadline: ಆದಾಯ ತೆರಿಗೆ ಇಲಾಖೆಯು ಆದಾಯ ತೆರಿಗೆ ರಿಟರ್ನ್ (Income tax returns) ಸಲ್ಲಿಸಲು ಕೊನೆಯ ದಿನಾಂಕವನ್ನು ಕೇವಲ ಒಂದು ದಿನ ವಿಸ್ತರಿಸಿದೆ. ಆದ್ದರಿಂದ, ಐಟಿಆರ್ ಸಲ್ಲಿಸಲು ಈ ಮೊದಲು ಸೆಪ್ಟೆಂಬರ್ 15 ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿತ್ತು. ಇದೀಗ ಕೊನೆಯ ದಿನಾಂಕ ಗಡುವು ವಿಸ್ತರಿಸಿ ಈಗ ಸೆಪ್ಟೆಂಬರ್ 16, 2025 ಆಗಿದೆ.

ಈ ಮಧ್ಯೆ ವೆಬ್ಸೈಟ್ ಕ್ರ್ಯಾಷ್ ಆಗಿರುವುದೂ ಸೇರಿದಂತೆ ಬೇರೆ ಬೇರೆ ಸಮಸ್ಯೆಗಳು ಎದುರಾಗಿ ಐಟಿಆರ್ (ITR ) ಸಲ್ಲಿಕೆ ವಿಳಂಬವಾಗಿತ್ತು. ಹಾಗಾಗಿ ಗಡುವು ವಿಸ್ತರಣೆ ಮಾಡುವಂತೆ ಮನವಿಗಳು ಕೂಡ ಬಂದಿತ್ತು. ಇದೀಗ ಒಂದು ದಿನ ದಿನ ಹೆಚ್ಚಿನ ಕಾಲಾವಕಾಶವನ್ನು ನೀಡಲಾಗಿದೆ.

ಇದನ್ನೂ ಓದಿ:Karnataka Gvt : ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ – ಗೌರವಧನ ಪಾವತಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ

ಐಟಿಆರ್ ಸಲ್ಲಿಕೆಗೆ ಇರುವ ಡೆಡ್​ಲೈನ್ ಒಳಗೆ ಪಾವತಿಸದೆ ವಿಳಂಬ ಮಾಡಿದರೆ ವಿವಿಧ ದಂಡಗಳು ಕಾದಿರುತ್ತವೆ. 1,000 ರೂನಿಂದ ಹಿಡಿದು 5,000 ರೂವರೆಗೆ ತಡಪಾವತಿ ಶುಲ್ಕ ತೆರಬೇಕಾಗುತ್ತದೆ.

Comments are closed.