Koppala: ‘ಚಾಮುಂಡೇಶ್ವರಿಗೆ ಹೂ ಮುಡಿಸಲು ದಲಿತ ಮಹಿಳೆಗೆ ಅವಕಾಶ ಇಲ್ಲ’ ಎಂದ ಯತ್ನಾಳ್ – ಅವಹೇಳನಕಾರಿ ಹೇಳಿಕೆ ಆರೋಪದಡಿ ‘FIR’ ದಾಖಲು

Share the Article

Koppala: ದಲಿತ ಮಹಿಳೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇರೆಗೆ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಆಕ್ರೋಶ ಹೊರ ಹಾಕುತ್ತಿವೆ. ಇದೇ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚಾಮುಂಡಿ ತಾಯಿಗೆ ಹೂ ಮುಡಿಸಲು ಸನಾತನ ಧರ್ಮದವರಿಗೆ ಮಾತ್ರ ಅವಕಾಶ ಇದೆ. ಸಾಮಾನ್ಯ ದಲಿತ ಮಹಿಳೆಗೂ ಅವಕಾಶ ಇಲ್ಲ ಎಂದು ಹೇಳಿಕೆ ನೀಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಈ ವಿಡಿಯೋ ಆಧಾರದ ಮೇಲೆ ಮಲ್ಲಿಕಾರ್ಜುನ ಪೂಜಾರ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ:Teacher recruitment: 18,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ- ಸಚಿವ ಮಧು ಬಂಗಾರಪ್ಪ

‘ದಲಿತ ಮಹಿಳೆಯರಿಗೆ ಹೂ ಮುಡಿಸಲು ಅವಕಾಶವಿಲ್ಲ ಎಂದು ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ದಲಿತ ಸಮುದಾಯಕ್ಕೆ ಅವರು ಅವಮಾನ ಮಾಡಿದ್ದಾರೆ. ಯತ್ನಾಳ ನಿತ್ಯ ಪ್ರಚೋದನಕಾರಿ ಹಾಗೂ ಕೋಮು ಸಂಘರ್ಷದ ಹೇಳಿಕೆಗಳನ್ನು ನೀಡುತ್ತಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ದಲಿತ ಸಮುದಾಯುದ ಯುವಮುಖಂಡ ಮಲ್ಲಿಕಾರ್ಜುನ ಪೂಜಾರ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಾಗಿದೆ

Comments are closed.