MUDA Scam: ಮೂಡಾ ಹಗರಣ: ಮಾಜಿ ಆಯುಕ್ತ ದಿನೇಶ್ ಕುಮಾರ್ ಅರೆಸ್ಟ್

MUDA Scam: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಸಂಬಂಧಪಟ್ಟಂತೆ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧನ ಮಾಡಿದ್ದಾರೆ.

ಇಡಿ ವಿಚಾರಣೆಗೆ ಇಂದು ಬರುವಂತೆ ದಿನೇಶ್ ಕುಮಾರ್‌ಗೆ ನೋಟಿಸ್ ನೀಡಲಾಗಿತ್ತು. ವಿಚಾರಣೆಗೆ ಬಂದ ಸಮಯದಲ್ಲಿ ದಿನೇಶ್ ಕುಮಾರ್ ಅವರನ್ನು ಬಂಧನ ಮಾಡಲಾಗಿದ್ದು, ನ್ಯಾಯಾಧೀಶರ ಮುಂದೆ ಹಾಜರು ಪಡಿಸಬೇಕಿದೆ. ದಿನೇಶ್ ಅಕ್ರಮ ಹಣ ವರ್ಗಾವಣೆ ಮಾಡಿರುವುದು ಸಾಬೀತಾಗಿದೆ ಎಂದು ಇಡಿ ಈ ಹಿಂದೆನೇ ಹೇಳಿತ್ತು.
ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ ಸೈಟ್‌ಗಳನ್ನು ಮರುಹಂಚಿಕೆ ಮಾಡಿ ಲಾಭ ಮಾಡಿದ್ದಾರೆ. ದಾಖಲೆಯಲ್ಲಿ ಆಸ್ತಿ ಗಳಿಕೆ ಮಾಡಿರುವುದಕ್ಕೆ ದಾಖಲೆ ಪತ್ತೆಯಾಗಿದೆ ಎಂದು ಇಡಿ ಹೇಳಿದೆ.
Comments are closed.