Modi Birthday : ಪ್ರಧಾನಿ ಮೋದಿಗೆ 75ನೇ ಹುಟ್ಟುಹಬ್ಬ – ರಾಹುಲ್​ ಗಾಂಧಿ, ಖರ್ಗೆ ವಿಷ್​ ಮಾಡಿದ್ದು ಹೀಗೆ

Share the Article

Modi Birthday : ಇಂದು ಪ್ರಧಾನಿ ಮೋದಿ 75 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಹಲವು ಗಣ್ಯರು ಶುಭಾಶಯ ಕೋರಿದ್ದಾರೆ. ಮೋದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ವಿಶ್ ಮಾಡಿದ್ದು ಹೀಗೆ.

ರಾಹುಲ್ ಗಾಂಧಿ ಶುಭಾಶಯ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಮೋದಿಗೆ ತಮ್ಮ ಆತ್ಮೀಯ ಶುಭಾಶಯಗಳನ್ನು ಕಳುಹಿಸಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಮತ್ತು ಉತ್ತಮ ಆರೋಗ್ಯವನ್ನು ಹಾರೈಸುತ್ತೇನೆ” ಎಂದು ಅವರು X ನಲ್ಲಿ ಬರೆದಿದ್ದಾರೆ.

ಖರ್ಗೆ ವಿಶ್ :

ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, ‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ಸಿಗಲಿ’ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ:Tech Tips: ಯಾರಿಗೂ ತಿಳಿಯದಂತೆ ವಾಟ್ಸಪ್ ನಲ್ಲಿ ಸ್ಟೇಟಸ್ ನೋಡೋದು ಹೇಗೆ?

ಕಾಂಗ್ರೆಸ್​ ನಾಯಕ ಶಶಿ ತರೂರ್ ಅವರು, “ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಮುಂಬರುವ ವರ್ಷವು ಉತ್ತಮ ಆರೋಗ್ಯ, ಸಂತೋಷ ಮತ್ತು ರಾಷ್ಟ್ರ ಸೇವೆಯಲ್ಲಿ ನಿರಂತರ ಯಶಸ್ಸಿನಿಂದ ತುಂಬಿರಲಿ ಎಂದು ಸೋಷಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದರೆ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರು ಪ್ರಧಾನಿ ಮೋದಿ ಅವರು, “ನಿಮಗೆ ಉತ್ತಮ ಆರೋಗ್ಯ, ಸಂತೋಷ ಮತ್ತು ದೀರ್ಘಾಯುಷ್ಯ ಸಿಗಲಿ. ನಿಮ್ಮ ಸಮರ್ಥ ಮಾರ್ಗದರ್ಶನದಲ್ಲಿ ನಮ್ಮ ರಾಷ್ಟ್ರದ ನಿರಂತರ ಪ್ರಗತಿಯನ್ನು ನಾನು ಬಯಸುತ್ತೇನೆ ಮತ್ತು ಮುಂಬರುವ ವರ್ಷಗಳಲ್ಲಿ ಅದರ ಹೆಚ್ಚಿನ ಯೋಗಕ್ಷೇಮ ಮತ್ತು ಅಭಿವೃದ್ಧಿಯನ್ನು ಎದುರು ನೋಡುತ್ತಿದ್ದೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

Comments are closed.