BJP MLA Muniratna: ಸಾಮೂಹಿಕ ಅ*ಚಾರ ಆರೋಪ: ಶಾಸಕ ಮುನಿರತ್ನ ಅರ್ಜಿ ಹೈಕೋರ್ಟ್ನಲ್ಲಿ ವಜಾ

BJP MLA Muniratna: ಸಾಮೂಹಿಕ ಅ*ಚಾರ ನಡೆಸಿದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಮಾಡಲು ಕೋರಿ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಹಾಗೂ ಪ್ರಕರಣದ ಇತರ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾ ಮಾಡಿದೆ. ವಿಚಾರಣಾಧೀನ ನ್ಯಾಯಾಲಯಕ್ಕೆ ತನಿಖೆ ಮಾಡಿರುವ ವಿಶೇಷ ತನಿಖಾ ದಳವು ಬಿ ರಿಪೋರ್ಟ್ ಸಲ್ಲಿಸಿರುವುದನ್ನು ಪರಿಗಣಿಸಿರುವ ಹೈಕೋರ್ಟ್, ಎಸ್ಐಟಿಯು 42ನೇ ಎಸಿಎಂಎಂ ಕೋರ್ಟ್ಗೆ ಸಲ್ಲಿಸಿರುವ ಬಿ ರಿಪೋರ್ಟ್ ಅನ್ನು ನ್ಯಾಯಾಲಯವು ಒಪ್ಪಿಕೊಂಡಿರುವ ಕಾರಣ ಅರ್ಜಿಯು ವಿಚಾರಣಾ ಮಾನ್ಯತೆ ಕಳೆದುಕೊಂಡಿದ್ದು, ವಜಾ ಮಾಡಲಾಗುತ್ತಿದೆ ಎಂದು ಆದೇಶಿಸಿದೆ.

Comments are closed.