C M Siddaramaiah: ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರೈತರಿಗೆ ಸಿಹಿ ಸುದ್ದಿ

C M Siddaramaiah: ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಎಂ, ಬೆಳೆ ಹಾನಿ ಹಿನ್ನೆಲೆಯಲ್ಲಿ ರೈತರು ಸಾಲ ಮನ್ನಾ ಮಾಡುವಂತೆ ಕೇಳುತ್ತಿರುವುದು, ಈ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಬೆಳೆಹಾನಿ ಹಿನ್ನೆಲೆಯಲ್ಲಿ ಜಂಟಿ ಸಮೀಕ್ಷೆ ಮಾಡಲಾಗುತ್ತಿದೆ. ವಾರದಲ್ಲಿ ಜಂಟಿ ಸಮೀಕ್ಷೆಯ ಅಂತಿಮ ವರದಿ ಬಂದ ನಂತರ ಬೆಳೆ ಹಾನಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ಈ ಬಾರಿ ಉತ್ತಮ ಮಳೆಯಾಗಿದ್ದು, ಉತ್ತಮ ಬೆಳೆಗಳ ನಿರೀಕ್ಷೆಯಿತ್ತು. ಆದರೆ ಯಾದಗಿರಿ, ಕಲಬುರಗಿ, ಬೀದರ್ ಸೇರಿ ಹಲವು ಕಡೆ ಬೆಳೆ ಹಾನಿಯಾಗಿದೆ. ಕಳೆದ ಬಾರಿ ಬೆಳೆ ಹಾನಿ ಕುರಿತು ವರದಿ ಕಳಿಸಿದಾಗ ಕೇಂದ್ರ ಸರಕಾರ ಪರಿಹಾರ ನೀಡಿಲ್ಲ. ನಾವು ಸುಪ್ರೀಂ ಕೋರ್ಟ್ಗೆ ಹೋಗಿ ಪರಿಹಾರ ಪಡೆದುಕೊಂಡೆವು. ಈ ಬಾರಿ ಹೆಚ್ಚಿನ ಪರಿಹಾರ ನೀಡಲು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ನೀಡಲಾಗಿದೆ.
ಆದರೆ ಕೇಂದ್ರ ಸ್ಪಂದಿಸುತ್ತಿಲ್ಲ ಎಂದು ಆರೋಪ ಮಾಡಿದ್ದಾರೆ. ಬೆಳೆ ಹಾನಿ ಹಿನ್ನೆಲೆಯಲ್ಲಿ ರೈತರು ಸಾಲಮನ್ನಾ ಬಗ್ಗೆ ಮನವಿ ಮಾಡಿರುವುದು ಗಮನದಲ್ಲಿದ್ದು, ಪರಿಶೀಲನೆ ಮಾಡಲಾಗುವುದು ಎಂದು ಹೇಳಿದ್ದಾರೆ.
Comments are closed.