Karnataka: 9 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

Karnataka: ಕರ್ನಾಟಕ (Karnataka) ರಾಜ್ಯ ಸರಕಾರವು 9 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.

• ರಾಜ್ಯ ವಿತ್ತೀಯ ಕಾರ್ಯನೀತಿ ಸಮಸ್ಥೆಯ ಹೆಚ್ಚುವರಿ ನಿರ್ದೇಶಕ ರಂಗಪ್ಪ ಎಸ್. ಅವರನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾವಣೆ.
• ಸಕಾಲ ಯೋಜನೆಯ ಹೆಚ್ಚುವರಿ ಯೋಜನಾ ನಿರ್ದೇಶಕಿ ಪಲ್ಲವಿ ಆಕೃತಿ ಅವರನ್ನು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯ ವಿಶೇಷ ಅಧಿಕಾರಿಯಾಗಿ ವರ್ಗಾವಣೆ.
• ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕ ಗಿರೀಶ್ ಆರ್. ಅವರನ್ನು ರಾಷ್ಟ್ರೀಯ ತೋಟಗಾರಿಕೆ ಯೋಜನೆ ಹಾಗೂ ತೋಟಗಾರಿಕೆ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ.
• ಹಾಗೂ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಗಂಗೂಬಾಯಿ ರಮೇಶ್ ಮಣಕರ್ ಅವರನ್ನು ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ ಒಂಬುಡ್ಸ್ ಮನ್ರನ್ನಾಗಿ ವರ್ಗಾವಣೆ.
• ಕರ್ನಾಟಕ ಪಬ್ಲಿಕ್ ಲ್ಯಾಂಡ್ಸ್ ಕಾರ್ಪೋರೇಷನ್ನ ವ್ಯವಸ್ಥಾಪಕ ನಿರ್ದೇಶಕ ವಸಂತ ಕುಮಾರ್ ಪಿ. ಅವರನ್ನು ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆ.
• ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ರಮ್ಯಾ ಎಸ್. ಅವರನ್ನು ರಾಜ್ಯ ವಿದ್ಯುತ್ ಕಾರ್ಖಾನೆ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ.
• ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಶಿವಪ್ರಸಾದ್ ಪಿ.ಆರ್. ಅವರನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆ
• ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯ ವಿಶೇಷ ಅಧಿಕಾರಿಯಾಗಿ ಪೂವಿತಾ ಎಸ್. ಅವರನ್ನು ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕಿಯನ್ನಾಗಿ ವರ್ಗಾವಣೆ.
ಇದನ್ನೂ ಓದಿ:Mysuru Dasara: “ಮೈಸೂರು ದಸರಾ” ಪ್ರಯುಕ್ತ ಕನ್ನಡ ಪುಸ್ತಕಗಳ ಪ್ರದರ್ಶನ, ರಿಯಾಯಿತಿ ಮಾರಾಟ ಮೇಳ
• ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಲಿಂಗಮೂರ್ತಿ ಜಿ. ಅವರನ್ನು ಕರ್ನಾಟಕ ಪಬ್ಲಿಕ್ ಲ್ಯಾಂಡ್ಸ್ ಕಾರ್ಪೋರೇಷನ್ನ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ.
Comments are closed.