Mysuru Dasara: “ಮೈಸೂರು ದಸರಾ” ಪ್ರಯುಕ್ತ ಕನ್ನಡ ಪುಸ್ತಕಗಳ ಪ್ರದರ್ಶನ, ರಿಯಾಯಿತಿ ಮಾರಾಟ ಮೇಳ

Share the Article

Mysuru Dasara: ಮೈಸೂರು ದಸರಾ ಪ್ರಯುಕ್ತ ಸೆ.22ರಿಂದ ಕನ್ನಡ ಪುಸ್ತಕಗಳ ಪ್ರದರ್ಶನ, ರಿಯಾಯಿತಿ ಮಾರಾಟ ಮೇಳ ನಡೆಯಲಿದೆ. ಹೌದು, ಸೆ.22ರಿಂದ ಅ.1ರವರೆಗೆ ಬೆಳಿಗ್ಗೆ 10ರಿಂದ ರಾತ್ರಿ 8.30ರವರೆಗೆ ನಗರದ ಹಳೆಯ ಜಿಲ್ಲಾಧಿಕಾರಿ ಕಚೇರಿ ಸಮೀಪದ ಸ್ಕೌಟ್ಸ್‌ ಮತ್ತು ಗೈಡ್ಸ್‌ ಮೈದಾನದಲ್ಲಿ ಕನ್ನಡ ಪುಸ್ತಕಗಳ ಪ್ರದರ್ಶನ ಹಾಗೂ ರಿಯಾಯಿತಿ ಮಾರಾಟ ಮೇಳ ಆಯೋಜಿಸಲಾಗಿದೆ’ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ತಿಳಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಅವರು, ’22ರಂದು ಬೆಳಿಗ್ಗೆ 10.30ಕ್ಕೆ ಚಾಮುಂಡಿಬೆಟ್ಟದಲ್ಲಿ ನಡೆಯುವ ನಾಡ ಹಬ್ಬ ದಸರಾ (Mysuru Dasara) ಉದ್ಘಾಟನೆ ಕಾರ್ಯಕ್ರಮದಲ್ಲಿ, ಪ್ರಾಧಿಕಾರದಿಂದ ಪ್ರಕಟಿಸಿರುವ ಹಾಗೂ ಶಿವಾನಂದ ವಿರಚಿತ ಬಾನು ಮುಷ್ತಾಕ್ ಅವರ ಬದುಕು-ಬರಹ ಕುರಿತ ‘ಬುಕರ್‌ ಬಾನು’ ಪುಸ್ತಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಲಿದ್ದು, ಸಂಜೆ 5ಕ್ಕೆ ಮೇಳವನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ಎಸ್.ತಂಗಡಗಿ ಉದ್ಘಾಟಿಸುವರು’ ಎಂದು ಮಾಹಿತಿ ನೀಡಿದರು.

‘ಮೇಳದ ಮೊದಲು ‘ಪುಸ್ತಕ ರಥ’ವು ನಗರದಾದ್ಯಂತ ಸಂಚರಿಸಿ ಜಾಗೃತಿ ಮೂಡಿಸಲಿದ್ದು, ಸೆ.20ರಂದು ಬೆಳಿಗ್ಗೆ 11ಕ್ಕೆ ಮಾನಸಗಂಗೋತ್ರಿಯ ಕುವೆಂಪು ಪ್ರತಿಮೆ ಎದುರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಚಾಲನೆ ನೀಡುವರು’ ಎಂದು ತಿಳಿಸಿದರು.

ಇದನ್ನೂ ಓದಿ:EPFO: EPFO ‘ಪಾಸ್‌ಬುಕ್ ಲೈಟ್’ ಬಿಡುಗಡೆ: `PF’ ಬ್ಯಾಲೆನ್ಸ್ ಪರಿಶೀಲನೆ ಇನ್ನೂ ಸುಲಭ!

’50ಸಾವಿರಕ್ಕೂ ಹೆಚ್ಚು ಪ್ರಕಟಣೆಗಳು ಮೇಳದಲ್ಲಿರಲಿವೆ. 28 ಪುಸ್ತಕ ಬಿಡುಗಡೆಗೊಳ್ಳಲಿದ್ದು, ಪ್ರತೀ ದಿನ ಬೆಳಿಗ್ಗೆ 11.30ಕ್ಕೆ ಆ ಕಾರ್ಯಕ್ರಮ ನಡೆಯಲಿದೆ’ ಎಂದು ತಿಳಿಸಿದರು.

Comments are closed.